ವಾಷಿಂಗ್ಟನ್: ಇರಾನ್ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಅಂತಹ ದೇಶಗಳು ಅಮೆರಿಕಕ್ಕೆ ಮಾರಾಟ ಮಾಡುವ ಎಲ್ಲ ಸರಕುಗಳ ಮೇಲೆ ತಕ್ಷಣವೇ ಶೇ 50ರಷ್ಟು ಸುಂಕ ವಿಧಿಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ.

ಈ ವಿಚಾರದಲ್ಲಿ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಸಾಮಾಜಿಕ ಮಾಧ್ಯಮ ಟ್ರುಥ್ನಲ್ಲಿ ಟ್ರಂಪ್ ತಿಳಿಸಿದ್ದಾರೆ.

ಎರಡು ವಾರಗಳ ತಾತ್ಕಾಲಿಕ ಕದನ ವಿರಾಮಕ್ಕೆ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಬುಧವಾರ ಸಮ್ಮತಿಸಿವೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿ ಕಳೆದ ಒಂದೂವರೆ ತಿಂಗಳಿಂದ ನಡೆಯುತ್ತಿರುವ ಸಂಘರ್ಷಕ್ಕೆ ಬಿಡುವು ಸಿಕ್ಕಂತಾಗಿದೆ.

ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಈ ಮಾತುಕತೆಗಳು ನಡೆದಿವೆ. ಈ ಮೊದಲು ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಸಮ್ಮತಿಸದಿದ್ದಲ್ಲಿ ಇರಾನ್ನ ನಾಗರಿಕತೆಯನ್ನು ನಾಶ ಮಾಡಲಾಗುವುದು ಎಂದು ಟ್ರಂಪ್ ಬೆದರಿಕೆ ಒಡ್ಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.