ನ್ಯೂಯಾರ್ಕ್: ‘ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಸ್ಥಿಕೆ ವಹಿಸಿದ ಮೇಲಷ್ಟೆ ಭಾರತ ಮತ್ತು ಪಾಕಿಸ್ತಾನ ‘ಅನಿಶ್ಚಿತ ಕದನ ವಿರಾಮ’ಕ್ಕೆ(“tenuous ceasefire”) ಒಪ್ಪಿಕೊಂಡವು’ ಎಂದು ಡೊನಾಲ್ಡ್ ಟ್ರಂಪ್ ಆಡಳಿತವು ನ್ಯೂಯಾರ್ಕ್ನ ನ್ಯಾಯಾಲಯವೊಂದಕ್ಕೆ ತಿಳಿಸಿದೆ.

‘ಉಭಯ ದೇಶಗಳ ನಡುವೆ ನಡೆಯಲಿದ್ದ ಪೂರ್ಣ ಪ್ರಮಾಣದ ಯುದ್ಧವನ್ನು ತಡೆಗಟ್ಟುವ ಉದ್ದೇಶದಿಂದ ಟ್ರಂಪ್ ಅವರು ಮಧ್ಯಸ್ಥಿಕೆ ವಹಿಸಿದರಲ್ಲದೇ, ಅಮೆರಿಕದೊಂದಿಗೆ ವ್ಯಾಪಾರ ನಡೆಸಲು ಎರಡೂ ದೇಶಗಳಿಗೆ ಅನುಕೂಲ ಒದಗಿಸುವ ಭರವಸೆ ನೀಡಿದರು’ ಎಂದೂ ನ್ಯಾಯಾಲಯಕ್ಕೆ ತಿಳಿಸಿದೆ.

ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ಅವರು ಅಂತರರಾಷ್ಟ್ರೀಯ ವ್ಯಾಪಾರ ನ್ಯಾಯಾಲಯಕ್ಕೆ ಕಳೆದ ವಾರ ಈ ಮಾಹಿತಿ ನೀಡಿದ್ದಾರೆ.

ಯಾವುದೇ ಮೂರನೇ ದೇಶದ ಮಧ್ಯಸ್ಥಿಕೆ ಇಲ್ಲದೆಯೇ ಎರಡೂ ದೇಶಗಳು ಕಾರ್ಯಾಚರಣೆ ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದಿವೆ ಎಂದು ಭಾರತ ಹೇಳುತ್ತಾ ಬಂದಿದೆ.

‘ದೇಶದ ರಾಷ್ಟ್ರೀಯ ಭದ್ರತೆ ಹಾಗೂ ಆರ್ಥಿಕತೆ ಕಾಪಾಡುವ ಉದ್ದೇಶದಿಂದ ಟ್ರಂಪ್ ಅವರು ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರಗಳ ಕಾಯ್ದೆಯಡಿ (ಐಇಇಪಿಎ) ದತ್ತವಾದ ಅಧಿಕಾರ ಬಳಸಿ, ಸುಂಕ ಹೇರುವ ವಿಚಾರವಾಗಿ ನಿರ್ಧಾರ ಕೈಗೊಂಡಿದ್ದಾರೆ. ಜಾಗತಿಕ ಮಟ್ಟದ ರಾಜತಾಂತ್ರಿಕ ವಿಷಯಗಳಲ್ಲಿ ಸುಂಕಗಳ ನಿರ್ವಹಣೆ ನಿರ್ಣಾಯಕ ಪಾತ್ರ ವಹಿಸುತ್ತದೆ’ ಎಂದೂ ಲುಟ್ನಿಕ್ ತಿಳಿಸಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನ ಅಣ್ವಸ್ತ್ರಗಳನ್ನು ಹೊಂದಿವೆ. 13 ದಿನಗಳ ಹಿಂದೆ, ಯುದ್ಧದ ಸನ್ನಾಹದಲ್ಲಿದ್ದ ಈ ದೇಶಗಳು ಮೇ 10ರಂದು ‘ಅನಿಶ್ಚಿತ ಕದನ ವಿರಾಮ’ಕ್ಕೆ ಸಮ್ಮತಿಸಿದವು. ಇದು ಟ್ರಂಪ್ ಅವರ ಮಧ್ಯಸ್ಥಿಕೆಯಿಂದಾಗಿಯೇ ಸಾಧ್ಯವಾಯಿತು’ ಎಂದು ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.