ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮಗೊಂಡರೆ, ಪಾಕಿಸ್ತಾನಕ್ಕೆ ಭೇಟಿ ನೀಡುವ ಬಗ್ಗೆ ಚಿಂತಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದರು.

ನೆವಾಡಾ ಮತ್ತು ಅರಿಜೋನಾ ಪ್ರವಾಸಕ್ಕೆ ತೆರಳುವ ಮುನ್ನ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ‘ಇರಾನ್ ಜೊತೆಗಿನ ಮಾತುಕತೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಒಪ್ಪಂದಕ್ಕೆ ಬರಬಹುದು’ ಎಂದು ಸುಳಿವು ನೀಡಿದರು.

‘ಶಾಂತಿ ಒಪ್ಪಂದ ಅಂತಿಮವಾದಲ್ಲಿ, ಒಪ್ಪಂದಕ್ಕೆ ಸಹಿ ಹಾಕಲು ಪಾಕಿಸ್ತಾನಕ್ಕೆ ಭೇಟಿ ನೀಡಬಹುದು’ ಎಂದು ಹೇಳಿದರು.

ಇದೇ ವೇಳೆ, ಅಮೆರಿಕ-ಇರಾನ್ ಮಾತುಕತೆಯಲ್ಲಿ ಸಂಧಾನಕಾರರಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಂ ಮುನೀರ್ ಅವರ ಬಗ್ಗೆ ಮೆಚ್ಚುಗೆಯ ಸುರಿಮಳೆ ಸುರಿಸಿದರು.

‘ಅಲ್ಲಿನ ಫೀಲ್ಡ್ ಮಾರ್ಷಲ್(ಅಸಿಂ ಮುನೀರ್) ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಧಾನಿಯವರು ಕೂಡ ನಿಜಕ್ಕೂ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ನಾನು ಅಲ್ಲಿಗೆ ಹೋಗಬಹುದು. ಅವರು ನನ್ನ ಉಪಸ್ಥಿತಿಯನ್ನು ಬಯಸುತ್ತಿದ್ದಾರೆ’ ಎಂದು ಅವರು ತಿಳಿಸಿದರು.

‘ಪರಮಾಣು ಶಸ್ತ್ರಾಸ್ತ್ರ ಹೊಂದಲು ಬಿಡಲ್ಲ’

ಲಾಸ್ವೇಗಾಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ತಡೆಯುವುದು ಮಾತುಕತೆಯ ಕೇಂದ್ರ ಉದ್ದೇಶವಾಗಿದೆ ಎಂದು ಪುನರುಚ್ಚರಿಸಿದರು.

‘ನಾವು ಮಾಡಬೇಕಾದ ಮುಖ್ಯ ಕೆಲಸವೆಂದರೆ ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದದಂತೆ ನೋಡಿಕೊಳ್ಳುವುದು. ಇದು ಅತ್ಯಂತ ಮುಖ್ಯವಾಗಿದೆ ಮತ್ತು ಇರಾನ್ ಸಹ ಇದಕ್ಕೆ ಒಪ್ಪಿಕೊಂಡಿದೆ’ ಎಂದರು.

‘ಒಂದು ವೇಳೆ ಮಾತುಕತೆ ಯಶಸ್ವಿಯಾದರೆ, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೋರಬೀಳುತ್ತದೆ. ಇದರಿಂದ ತೈಲ ಬೆಲೆಗಳು ಇಳಿಕೆಯಾಗಬಹುದು ಮತ್ತು ಪ್ರಮುಖ ಹಡಗು ಸಾಗಣೆ ಮಾರ್ಗಗಳಲ್ಲಿ ಸ್ಥಿರತೆ ಸುಧಾರಿಸಬಹುದು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.