ವಾಷಿಂಗ್ಟನ್/ನ್ಯೂಯಾರ್ಕ್: ಮುಂದಿನ ವಾರ ಪ್ರಧಾನಿ ಮೋದಿ ಅವರ ಅಮೆರಿಕ ಪ್ರವಾಸದ ವೇಳೆ ಅವರನ್ನು ಭೇಟಿಯಾಗುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ

ಪ್ರಧಾನಿ ಮೋದಿ ಸೆ. 21–23ರವರೆಗೆ ಮೂರು ದಿನ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಡೆಲವರ್ ರಾಜ್ಯದ ವಿಲ್ಮಿಂಗ್ಟನ್ನಲ್ಲಿ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿರುವ ‘ಕ್ವಾಡ್ ಶೃಂಗಸಭೆ’ಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಭಾಗವಹಿಸಲಿದ್ದಾರೆ.

ನಂತರ ನ್ಯೂಯಾರ್ಕ್ಗೆ ತೆರಳಲಿರುವ ಮೋದಿ, ಸೆ.22 ರಂದು ಲ್ಯಾಂಗ್ ಐಲ್ಯಾಂಡ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಲಿದ್ದಾರೆ. ಬಳಿಕ ಸೆ.23 ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಅವರು ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

‘ಮೋದಿ ಅದ್ಭುತ ವ್ಯಕ್ತಿ. ಮುಂದಿನ ವಾರ ಅವರು ಅಮೆರಿಕಕ್ಕೆ ಬಂದಾಗ ಅವರನ್ನು ಭೇಟಿಯಾಗುತ್ತೇನೆ’ ಎಂದು ಮಾಧ್ಯಮದೊಂದಿಗೆ ಮಾತನಾಡುವಾಗ ಟ್ರಂಪ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.