ಮಿನಿಯಾಪೊಲಿಸ್: ವಲಸಿಗರ ವಿರುದ್ಧದ ಕಾರ್ಯಾಚರಣೆ ವೇಳೆ ಅಧಿಕಾರಿಗಳು ಇಲ್ಲಿ ವ್ಯಕ್ತಿಯೊಬ್ಬರನ್ನು ಗುಂಡಿಟ್ಟು ಕೊಂದಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ ಮಿನಿಯಾಸೊಟಾದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಯೊಬ್ಬರನ್ನು ಕಳುಹಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.

‘ಗಡಿ ಭದ್ರತೆಯ ಪ್ರಮುಖ ಅಧಿಕಾರಿ ಟಾಮ್ ಹೋಮನ್ ಅವರನ್ನು ಮಿನಿಯಾಪೊಲಿಸ್ಗೆ ಕಳುಹಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಅವರೇ ನನಗೆ ನೇರವಾಗಿ ಮಾಹಿತಿ ನೀಡಲಿದ್ದಾರೆ’ ಎಂದೂ ಟ್ರಂಪ್ ತಿಳಿಸಿದ್ದಾರೆ. ಮಿನಿಯಾಪೊಲಿಸ್ನಲ್ಲಿ ರಾಜಕೀಯ ಹಾಗೂ ಭದ್ರತಾ ಪರಿಸ್ಥಿತಿಗಳು ಕೈ ಮೀರದಂತೆ ತಡೆಯಲು ಟಾಮ್ ಅವರನ್ನು ನಿಯೋಜಿಸಲಾಗುತ್ತಿದೆ ಎಂದೂ ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.