ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೆಪ್ಟೆಂಬರ್ನಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಇಲ್ಲಿನ ಸ್ಥಳೀಯ ಸುದ್ದಿ ವಾಹಿನಿಗಳು ಗುರುವಾರ ವರದಿ ಮಾಡಿವೆ.

ಒಂದು ವೇಳೆ ಅವರ ಭೇಟಿ ಖಚಿತವಾದರೆ, ಸುಮಾರು ಎರಡು ದಶಕಗಳ ನಂತರ ಅಮೆರಿಕದ ಅಧ್ಯಕ್ಷರೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು. ( ಹಿಂದೆ 2006ರಲ್ಲಿ ಅಂದಿನ ಅಧ್ಯಕ್ಷ ಜಾರ್ಜ್ ಎಚ್. ಡಬ್ಲ್ಯು. ಬುಷ್ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು).

ಟ್ರಂಪ್ ಭೇಟಿಯ ಬಗ್ಗೆ ತಿಳಿದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ಹೇಳಿದ್ದಾರೆ.

ಸೆಪ್ಟೆಂಬರ್ನಲ್ಲಿ ಇಸ್ಲಾಮಾಬಾದ್ಗೆ ಭೇಟಿ ನೀಡಲಿರುವ ಟ್ರಂಪ್, ಬಳಿಕ ಭಾರತಕ್ಕೂ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಪಾಕಿಸ್ತಾನಕ್ಕೆ ಟ್ರಂಪ್ ಭೇಟಿಯ ಕುರಿತು ಶ್ವೇತಭವನ ಯಾವುದೇ ಮಾಹಿತಿ ನೀಡಿಲ್ಲ.
.ಪಾಕಿಸ್ತಾನ ಸೇನಾ ಮುಖ್ಯಸ್ಥ ಮುನೀರ್ಗೆ ಔತಣಕೂಟ ಆಯೋಜಿಸಿದ US ಅಧ್ಯಕ್ಷ ಟ್ರಂಪ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.