ವಾಷಿಂಗ್ಟನ್: ‘ರಷ್ಯಾದಿಂದ ತೈಲ ಖರೀದಿಸುವುದನ್ನು ಭಾರತ ಮುಂದುವರಿಸಿದರೆ ಭಾರಿ ಸುಂಕ ತೆರಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಏರ್ಫೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ‘ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ಸ್ಥಗಿತಗೊಳಿಸಲಿದೆ ಎನ್ನುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ’ ಎಂದೂ ಟ್ರಂಪ್ ಪುನರುಚ್ಚರಿಸಿದ್ದಾರೆ.

‘ಮಾರುಕಟ್ಟೆಯ ಬೇಡಿಕೆ ಆಧರಿಸಿ ವಿವಿಧ ಮೂಲಗಳಿಂದ ಇಂಧನ ಖರೀದಿಸಲು ಆದ್ಯತೆ ನೀಡಲಾಗುವುದು’ ಎಂಬ ಭಾರತದ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಟ್ರಂಪ್, ‘ಭಾರತ ಅಂತಹ ಹೇಳಿಕೆಗಳನ್ನು ನೀಡಿದೆ ಎಂದು ನಾನು ನಂಬುವುದಿಲ್ಲ. ಮೋದಿ ಅವರೊಂದಿಗೆ ಮಾತನಾಡಿದೆ. ಅವರು ರಷ್ಯಾದೊಂದಿಗೆ ತೈಲ ಖರೀದಿಸುವ ವ್ಯವಹಾರವನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು’ ಎಂದು ತಿಳಿಸಿದ್ದಾರೆ.

ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಮೂಲಕ ಭಾರತವು ರಷ್ಯಾಗೆ ಯುದ್ಧಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡುತ್ತಿದೆ ಎಂದು ಅಮೆರಿಕ ಹೇಳುತ್ತಲೇ ಬಂದಿದೆ.

ಟ್ರಂಪ್ ಅವರು ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ 50ಕ್ಕೆ ಹೆಚ್ಚಿಸಿದ ನಂತರ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧಗಳು ಹದಗೆಟ್ಟಿವೆ. ಇದರಲ್ಲಿ ಭಾರತವು ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವುದಕ್ಕೆ ಶೇ 25ರಷ್ಟು ಹೆಚ್ಚುವರಿ ಸುಂಕವೂ ಸೇರಿದೆ.

ಭಾರತ–ಪಾಕಿಸ್ತಾನ ಯುದ್ಧ ನಿಲ್ಲಿಸಿದೆ: ಟ್ರಂಪ್

ವಾಷಿಂಗ್ಟನ್: ‘ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ. ಭಾನುವಾರ ಫಾಕ್ಸ್ ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್ ‘ಭಾರತ ಮತ್ತು ಪಾಕಿಸ್ತಾನದ ಸರಕುಗಳ ಮೇಲೆ ಶೇ 200ರಷ್ಟು ಸುಂಕ ವಿಧಿಸಲಾಗುವುದು. ಇದರಿಂದ ನೀವು ವ್ಯವಹರಿಸುವುದು ಅಸಾಧ್ಯವಾಗುತ್ತದೆ. ನಾವು ನಿಮ್ಮೊಂದಿಗೆ ವ್ಯವಹಾರ ಮಾಡುವುದಿಲ್ಲವೆಂದು ಬೆದರಿಕೆ ಹಾಕಿದ್ದೆ. ಇದರಿಂದ ಉಭಯ ದೇಶಗಳು ಯುದ್ಧವನ್ನು ನಿಲ್ಲಿಸಿದವು’ ಎಂದು ತಿಳಿಸಿದ್ದಾರೆ. ‘ಭಾರತ ಮತ್ತು ಪಾಕಿಸ್ತಾನವು ಪರಮಾಣು ರಾಷ್ಟ್ರಗಳು. ಎರಡೂ ರಾಷ್ಟ್ರಗಳ ನಡುವಿನ ಯುದ್ಧದಲ್ಲಿ ಏಳು ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಇದನ್ನು ತಡೆಯದೇ ಇದ್ದಿದ್ದರೆ ಪರಮಾಣು ಯುದ್ಧ ಸಂಭವಿಸುವ ಸಾಧ್ಯತೆ ಇತ್ತು’ ಎಂದು ಹೇಳಿದ್ದಾರೆ. ಆದರೆ ಆ ಯುದ್ಧ ವಿಮಾನಗಳು ಯಾವ ರಾಷ್ಟ್ರಗಳಿಗೆ ಸೇರಿದವು ಎಂಬುದನ್ನು ಟ್ರಂಪ್ ಸ್ಪಷ್ಟಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.