ವಾಷಿಂಗ್ಟನ್: ‘ಗಾಜಾದ ಒಳಗೆ ದಾಳಿ ಮುಂದುವರಿಸಿದರೆ ನಿಮ್ಮ ಹತ್ಯೆಗೈಯುವುದು ಬಿಟ್ಟು ಬೇರೆ ದಾರಿಯಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಮಾಸ್ ಬಂಡುಕೋರರಿಗೆ ಎಚ್ಚರಿಕೆ ನೀಡಿದ್ದಾರೆ.

‘ಗಾಜಾದಲ್ಲಿ ವಿರೋಧಿ ಗುಂಪುಗಳ ಮೇಲೆ ಹಮಾಸ್ ದಾಳಿ ನಡೆಸಬಾರದು. ನನ್ನ ತಾಳ್ಮೆಗೂ ಮಿತಿಯಿದೆ. ಹಮಾಸ್ ಶಸ್ತ್ರಾಸ್ತ್ರಗಳನ್ನು ತ್ಯಜಿಸಬೇಕು. ಒಂದು ವೇಳೆ ತ್ಯಜಿಸದಿದ್ದರೆ, ಶಸ್ತ್ರಾಸ್ತ್ರ ತ್ಯಜಿಸುವಂತೆ ನಾವು ಮಾಡುತ್ತೇವೆ; ಅದೂ ಕ್ಷಿಪ್ರವಾಗಿ ಮತ್ತು ಹಿಂಸಾತ್ಮಕವಾಗಿ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಗಾಜಾ ಕದನ ವಿರಾಮ ಬಹುತೇಕ ಫಲಿಸಿದ್ದು, ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಅಂತ್ಯಗೊಳಿಸುವ ವಿಶ್ವಾಸದಲ್ಲಿರುವ ಟ್ರಂಪ್ ಅವರು ಸಾಮಾಜಿಕ ಜಾಲತಾಣ ‘ಟ್ರೂತ್’ನಲ್ಲಿ ಈ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಕುರಿತು ಶ್ವೇತಭವನ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.