ಟೆಲ್ ಅವೀವ್: ರಷ್ಯಾ ಹಾಗೂ ಉಕ್ರೇನ್ ನಡುವಣ ಯುದ್ಧವನ್ನು ಕೊಣಿಗಾಣಿಸುವ ನಿಟ್ಟಿನಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ವಾರ ಉಕ್ರೇನ್ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ.

ಮಾಸ್ಕೊ ಹಾಗೂ ಕೀವ್ ನಡುವೆ ಶಾಂತಿ ಮಾತುಕತೆಗೆ ಟ್ರಂಪ್ ಮಧ್ಯಸ್ಥಿಕೆ ವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಇಸ್ರೇಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರುಬಿಯೊ, 'ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಹಲವು ಬಾರಿ ಮಾತುಕತೆ ನಡೆಸಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಬಹುಶಃ ಮುಂದಿನ ವಾರ ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತ್ತೆ ಮಾತುಕತೆ ನಡೆಸುವ ಸಾಧ್ಯತೆಯಿದೆ' ಎಂದು ತಿಳಿಸಿದ್ದಾರೆ.

'ಶಾಂತಿ ಸ್ಥಾಪನೆಗಾಗಿ ಟ್ರಂಪ್ ಯತ್ನವನ್ನು ಮುಂದುವರಿಸಲಿದ್ದಾರೆ. ಸದ್ಯಕ್ಕೆ ಟ್ರಂಪ್ ತಮ್ಮ ಪ್ರಯತ್ನವನ್ನು ನಿಲ್ಲಿಸುವ ಹಂತಕ್ಕೆ ತಲುಪಿಲ್ಲ' ಎಂದಿದ್ದಾರೆ.

ಶಾಂತಿ ಒಪ್ಪಂದಕ್ಕೆ ಮುಂದಾಗದಿದ್ದರೆ ರಷ್ಯಾದ ಮೇಲೆ ನಿರ್ಬಂಧ ಹೇರುವುದಾಗಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಟ್ರಂಪ್ ಪದೇ ಪದೇ ಎಚ್ಚರಿಕೆ ನೀಡುತ್ತಲೇ ಬಂದಿದ್ದರು.

ಈ ನಡುವೆ ಕದನ ವಿರಾಮಕ್ಕೆ ಬರುವ ಕುರಿತು ಅಲಾಸ್ಕದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
.ಸುಂಕ ವಿಧಿಸಲು ಜಿ7, ನ್ಯಾಟೊ ದೇಶಗಳಿಗೆ ಅಮೆರಿಕ ಕರೆ: ಬೆದರಿಕೆ ಕ್ರಮ ಎಂದ ಚೀನಾ.ಕ್ಯೂಬಾ ವಲಸಿಗನಿಂದ ಕನ್ನಡಿಗನ ಕೊಲೆ: ಬೈಡನ್ ವಲಸೆ ನೀತಿ ಖಂಡಿಸಿದ ಟ್ರಂಪ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.