ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಝೆಲೆನ್‌ಸ್ಕಿ ಜತೆ ಮಾತುಕತೆ; 3ನೇ ಮಹಾಯುದ್ಧ ಕುರಿತು ಟ್ರಂಪ್ ಉಲ್ಲೇಖ

Published : 28 ಸೆಪ್ಟೆಂಬರ್ 2024, 2:41 IST
Last Updated : 28 ಸೆಪ್ಟೆಂಬರ್ 2024, 2:41 IST
ಫಾಲೋ ಮಾಡಿ
Comments

ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ, ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಮಾತುಕತೆ ನಡೆಸಿದ್ದಾರೆ.

ಝೆಲೆನ್‌ಸ್ಕಿ ಜತೆ ಮಾತುಕತೆ ಕುರಿತು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮ 'ಟ್ರುಥ್‌'ನಲ್ಲಿ ಮಾಹಿತಿ ನೀಡಿದ್ದಾರೆ.

'ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಒಂದು ವೇಳೆ ನಾನು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದರೆ ರಷ್ಯಾ ಮತ್ತು ಉಕ್ರೇನ್‌ ನಡುವಣ ಯುದ್ಧ ಬೇಗನೇ ಕೊನೆಗೊಳ್ಳಲಿದೆ' ಎಂದು ಹೇಳಿದ್ದಾರೆ.

'ಹಾಗೊಂದು ವೇಳೆ ಯುದ್ಧ ಕೊನೆಗೊಳಿಸಲು ಸಾಧ್ಯವಾಗದಿದ್ದರೆ ಮೂರನೇ ಮಹಾಯುದ್ಧದತ್ತ ಹೋಗಲಿದ್ದೇವೆ' ಎಂದು ಹೇಳಿದ್ದಾರೆ.

ಇದೇ ವೇಳೆ ರಷ್ಯಾ ಹಾಗೂ ಉಕ್ರೇನ್ ನಡುವಣ ಸಂಘರ್ಷವನ್ನು ಇತ್ಯರ್ಥಗೊಳಿಸುವಲ್ಲಿ ಅಮೆರಿಕದ ಉಪಾಧ್ಯಕ್ಷೆ, ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

'ಯುದ್ಧವನ್ನು ಕೊನೆಗೊಳಿಸಲು ಕಮಲಾ ಹ್ಯಾರಿಸ್ ಅವರಿಗೆ ಎಂದಿಗೂ ಸಾಧ್ಯವಾಗುವುದಿಲ್ಲ. ಮತ್ತಷ್ಟು ಸಾವು ಹಾಗೂ ವಿನಾಶದ ಹೊರತಾಗಿ ಏನೂ ಬದಲಾಗುವುದಿಲ್ಲ' ಎಂದು ಟ್ರಂಪ್ ಹೇಳಿದ್ದಾರೆ.

ಮತ್ತೊಂದೆಡೆ ಟ್ರಂಪ್ ಜತೆಗಿನ ಭೇಟಿ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಮಾಹಿತಿ ನೀಡಿರುವ ಝೆಲೆನ್‌ಸ್ಕಿ, 'ನಾನು ಟ್ರಂಪ್ ಅವರೊಂದಿಗೆ ಫಲಪ್ರದವಾದ ಚರ್ಚೆ ನಡೆಸಿದ್ದೇನೆ' ಎಂದು ತಿಳಿಸಿದ್ದಾರೆ.

'ಉಕ್ರೇನ್‌ನ 'ವಿಕ್ಟರಿ ಪ್ಲ್ಯಾನ್' ಕುರಿತು ಕುರಿತು ಮಾಹಿತಿ ನೀಡಿದ್ದೇನೆ. ಸದ್ಯದ ಪರಿಸ್ಥಿತಿ ಮತ್ತು ಯುದ್ಧ ಪರಿಣಾಮಗಳ ಕುರಿತು ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಮಾತುಕತೆಗಾಗಿ ಆಭಾರಿಯಾಗಿದ್ದೇನೆ. ಶಾಂತಿ ನೆಲೆಸಬೇಕು' ಎಂದು ಅವರು ಹೇಳಿದ್ದಾರೆ.

'ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳ್ಳಬೇಕು ಎಂಬ ಸಮಾನ ನಿಲುವನ್ನು ನಾವು ವ್ಯಕ್ತಪಡಿಸಿದ್ದೇವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಗೆಲ್ಲಲು ಸಾಧ್ಯವಿಲ್ಲ. ಉಕ್ರೇನ್‌ ವಿಜಯಶಾಲಿಯಾಗಬೇಕು' ಎಂದು ಅವರು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಶೃಂಗದಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸ ಕೈಗೊಂಡಿರುವ ಝೆಲೆನ್‌ಸ್ಕಿ ಈಗಾಗಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT