ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಪಾಳದಲ್ಲಿ ಎರಡು ಬಾರಿ ಭೂಕಂಪ: ಉತ್ತರಾಖಂಡದಲ್ಲೂ ಕಂಪನ

Last Updated 28 ಡಿಸೆಂಬರ್ 2022, 2:31 IST
ಅಕ್ಷರ ಗಾತ್ರ

ನವದೆಹಲಿ: ನೇಪಾಳದಲ್ಲಿ ಮಂಗಳವಾರ ಮಧ್ಯರಾತ್ರಿ ಎರಡು ಬಾರಿ 5.3 ಮತ್ತು 4.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ನೇಪಾಳದ ಬಗ್ಲುಂಗ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಒಂದು ತಾಸಿನ ಅಂತರದಲ್ಲಿ ರಿಕ್ಟರ್ ಮಾಪನದಲ್ಲಿ 4.7 ಮತ್ತು 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನೇಪಾಳದ ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್ (ಎನ್‌ಇಎಂಆರ್‌ಸಿ) ತಿಳಿಸಿದೆ.

ಉತ್ತರಾಖಂಡದ ಉತ್ತರಕಾಶಿಯಲ್ಲೂ ತಡರಾತ್ರಿ 2.19ಕ್ಕೆ 3.1 ತೀವ್ರತೆಯ ಕಂಪನದ ಅನುಭವವಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಆದರೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ಪ್ರಕಾರ, ಉತ್ತರ ಪ್ರದೇಶದ ಅಯೋಧ್ಯೆಯ ಉತ್ತರ ಈಶಾನ್ಯಕ್ಕೆ 201 ಕಿ.ಮೀ. ದೂರದಲ್ಲಿ ರಾತ್ರಿ 1.52ಕ್ಕೆ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು, 10 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT