ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳತನಕ್ಕೆ ಯತ್ನ: ನೇಪಾಳದಲ್ಲಿ ಇಬ್ಬರು ಭಾರತೀಯರ ಬಂಧನ

Published 19 ಮಾರ್ಚ್ 2024, 12:38 IST
Last Updated 19 ಮಾರ್ಚ್ 2024, 12:38 IST
ಅಕ್ಷರ ಗಾತ್ರ

ಕಠ್ಮಂಡು: ದಕ್ಷಿಣ ನೇಪಾಳದಲ್ಲಿ ಕಳ್ಳತನ ಮಾಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಭಾರತೀಯರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಸರ್ಲಾಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಂಧಿತರಿಂದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಬಿಹಾರದ ಮೋತಿಹಾರ್‌ ಮೂಲದ ಜಿತೇಂದ್ರ ರಾವುತ್‌ ಹಾಗೂ ಆತನ ಸಹಚರ ಶನಿ ಸಿಂಘ್‌ ಎಂದು ಗುರುತಿಸಲಾಗಿದೆ. ಈ ಇಬ್ಬರು ಸೋಮವಾರ ಕಳ್ಳತನ ಮಾಡಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾರೆ. ಇಬ್ಬರೂ ಪೊಲೀಸರನ್ನು ನೋಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವೇಳೆ, ಪೊಲೀಸರು ಅವರತ್ತ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಜಿತೇಂದ್ರನ ಕಾಲಿಗೆ ಗುಂಡೇಟು ತಗುಲಿ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸರ್ಲಾಹಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. 

ಇಬ್ಬರೂ ಆರೋಪಿಗಳ ವಿರುದ್ಧ ಕಳ್ಳತನ ಸೇರಿದಂತೆ ಹಲವಾರು ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT