ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಶಾಲೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಹತ್ಯೆ

Published 20 ಮೇ 2024, 15:42 IST
Last Updated 20 ಮೇ 2024, 15:42 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದಲ್ಲಿ ಮಹಿಳೆಯೊಬ್ಬರು ಶಾಲೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಪೂರ್ವ ಚೀನಾದ ಜಿಯಾಂಗ್‌ಕ್ಸಿ ಪ್ರದೇಶದ ಗ್ಯುಕ್ಸಿ ನಗರದಲ್ಲಿ 45 ವರ್ಷದ ಮಹಿಳೆಯು ಪ್ರಾಥಮಿಕ ಶಾಲೆಯೊಂದರಲ್ಲಿ ಈ ಕೃತ್ಯ ಎಸಗಿದ್ದು ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಮಹಿಳೆಯು ‘ಪಾನ್‌’ ಎಂಬ ಉಪನಾಮ ಹೊಂದಿದವರಾಗಿದ್ದು ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ತಿಂಗಳಲ್ಲಿ ಚೀನಾದಲ್ಲಿ ನಡದ ಎರಡನೇ ಇರಿತ ಪ್ರಕರಣ ಇದಾಗಿದೆ. ಕಳೆದ ಬಾರಿ ಯುನಾನ್‌ ಪ್ರಾಂತ್ಯದ ಆಸ್ಪತ್ರೆಯೊಂದರಲ್ಲಿ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ್ದ. ಈ ಘಟನೆಯಲ್ಲಿ 21 ಜನರು ಗಾಯಗೊಂಡಿದ್ದರು‌.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT