ದುಬೈ(ಪಿಟಿಐ): ಸಂಯುಕ್ತ ಅರಬ್ ಒಕ್ಕೂಟ (ಯುಎಇ) ರಾಜಧಾನಿ ಅಬುಧಾಬಿಯಲ್ಲಿನ ರೆಸ್ಟೋರೆಂಟ್ ಒಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಒಬ್ಬ ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಭಾರತದ 106 ಮಂದಿ ಸೇರಿದಂತೆ 120 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಘಟನೆಯಲ್ಲಿ ಮೃತಪಟ್ಟ ಮತ್ತೊಬ್ಬ ವ್ಯಕ್ತಿ ಪಾಕಿಸ್ತಾನ ಮೂಲದವರಾಗಿದ್ದಾರೆ.

ಸೋಮವಾರ ಮಧ್ಯಾಹ್ನ ಸಂಭವಿಸಿದ ಈ ಘಟನೆಯಲ್ಲಿ ಭಾರತೀಯ ಮೃತಪಟ್ಟಿರುವುದನ್ನು ಅಬುಧಾಬಿಯಲ್ಲಿರುವ ಭಾರತದ ರಾಯಭಾರ ಕಚೇರಿ ದೃಢಪಡಿಸಿದೆ.

ಮೃತದೇಹವನ್ನು ಶೀಘ್ರವೇ ಭಾರತಕ್ಕೆ ರವಾನಿಸುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಭಾರತದ ರಾಯಭಾರಿ ಅಧಿಕಾರಿಗಳು ಮೃತನ ಕುಟುಂಬದ ಜೊತೆ ಸಂಪರ್ಕ ಸಾಧಿಸಿದ್ದು, ಅಗತ್ಯ ನೆರವುಗಳನ್ನು ನೀಡುತ್ತಿದ್ದಾರೆ. ಜೊತೆಗೆ ಗಾಯಗೊಂಡವರ ಮೇಲೆಯೂ ತೀವ್ರ ನಿಗಾ ವಹಿಸಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.