ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬುಧವಾರ ಮತ್ತೆ ಎರಡು ಕೊಲೆ ಪ್ರಕರಣಗಳು ದಾಖಲಾಗಿವೆ.
ಇದರೊಂದಿಗೆ ಹಸೀನಾ ವಿರುದ್ಧ ಒಟ್ಟು 94 ಕೊಲೆ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಬಹುತೇಕ ಕೊಲೆಗಳು ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದಿವೆ.
ಢಾಕಾ ನಿವಾಸಿಯೊಬ್ಬರನ್ನು ಜುಲೈ 19ರಂದು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಬುಧವಾರ ಹಸೀನಾ ಮತ್ತು ಇತರೆ 26 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆ ಸಂಬಂಧ ಪ್ರಕರಣ ದಾಖಲಾಗಿದೆ.
ವಿವಾದಾತ್ಮಕ ಮೀಸಲಾತಿ ವ್ಯವಸ್ಥೆ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ ಹಲವರು ಮೃತಪಟ್ಟಿದ್ದರು. ಬಳಿಕ ಪ್ರಧಾನಿ ಹುದ್ದೆ ತ್ಯಜಿಸಿ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.