ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಶಾವರ: ನೆಲಬಾಂಬ್ ಸಿಡಿದು ಇಬ್ಬರು ಸಾವು

Published 21 ಏಪ್ರಿಲ್ 2024, 16:04 IST
Last Updated 21 ಏಪ್ರಿಲ್ 2024, 16:04 IST
ಅಕ್ಷರ ಗಾತ್ರ

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನೆಲಬಾಂಬ್ ಸಿಡಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾನೆ.

ತಿರಾಹ್‌ ಕಣಿವೆ ಪ್ರದೇಶದಲ್ಲಿ ಬಾಲಕರು ಹಣಬೆಯ ಹುಡುಕಾಟದಲ್ಲಿ ತೊಡಗಿದ್ದರು. ಬಾಲಕನೊಬ್ಬ ಹುದುಗಿಸಿಟ್ಟಿದ್ದ ನೆಲಬಾಂಬ್ ಅನ್ನು ಆಕಸ್ಮಿಕವಾಗಿ ತುಳಿದಾಗ ಸಿಡಿದಿದೆ. ತೀವ್ರ ಗಾಯಗೊಂಡ ಒಬ್ಬ ಬಾಲಕ ಸ್ಥಳದಲ್ಲಿ ಹಾಗೂ ಮತ್ತೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟನು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ನಡೆದಿದೆ ಎಂದು ತಿಳಿಸಿದ್ದಾರೆ. ಅಫ್ಗಾನಿಸ್ತಾನ ಗಡಿಯ ಈ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT