ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಚುನಾವಣೆ ಮುಗಿಯುವವರೆಗೆ ವ್ಯಾಪಾರ ಒಪ್ಪಂದ ಇರುವುದಿಲ್ಲ: ಬ್ರಿಟನ್

Published 16 ಮಾರ್ಚ್ 2024, 2:42 IST
Last Updated 16 ಮಾರ್ಚ್ 2024, 2:42 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ ಮತ್ತು ಭಾರತದ ನಡುವೆ ಇತ್ತೀಚೆಗೆ ನಡೆದ ವ್ಯಾಪಾರ ಮಾತುಕತೆಯೂ ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡಿದೆ. ಇದೇ ಸಂದರ್ಭದಲ್ಲಿ ಭಾರತದಲ್ಲಿ ಮುಂಬರುವ ಲೋಕಸಭೆ ಚುನಾವಣೆ ಮುಗಿಯುವವರೆಗೆ ಯಾವುದೇ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವುದಿಲ್ಲ ಎಂದು ಬ್ರಿಟನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸರಕು, ಸೇವೆಗಳು ಮತ್ತು ಹೂಡಿಕೆಗೆ ಸಂಬಂಧಿಸಿ ನಿರೀಕ್ಷಿತ ಫಲಿತಾಂಶ ಪಡೆಯುವವರೆಗೆ ನಾವು ಒಪ್ಪಂದಕ್ಕೆ ಸಹಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ಆದರೆ, ಮುಕ್ತ ವ್ಯಾಪಾರ ಒಪ್ಪಂದದಿಂದ ಎರಡೂ ಕಡೆಯವರು ಹಿಂದೆ ಸರಿಯುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಇತ್ತೀಚೆಗೆ ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದ್ದರು. ಆದರೆ ಇದೇ ವರ್ಷ ಎರಡೂ ದೇಶಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಮುಕ್ತ ವ್ಯಾಪಾರ ಒಪ್ಪಂದ ಕುರಿತು ಇತ್ತೀಚೆಗೆ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ‘ದ್ವಿಪಕ್ಷೀಯ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ನಮ್ಮ ಬದ್ಧತೆಯ ಬಗ್ಗೆ ಸುನಕ್‌ ಅವರೊಂದಿಗೆ ಚರ್ಚಿಸಲಾಯಿತು’ ಎಂದು ಬರೆದುಕೊಂಡಿದ್ದರು.

ಮಾತುಕತೆ ವೇಳೆ ಉಭಯ ನಾಯಕರು, ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದದ ಪ್ರಗತಿಯನ್ನು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದ್ದರು. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ವರದಿ ತಿಳಿಸಿತ್ತು.

ಇತ್ತೀಚೆಗಷ್ಟೇ ಇಂಡೋ-ಪೆಸಿಫಿಕ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಹೆಚ್ಚಿಸುವ ದೇಶದ ವಿಶಾಲ ದೃಷ್ಟಿಕೋನದ ಭಾಗವಾಗಿ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಬದ್ಧತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT