ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂದುವರಿದ ರಷ್ಯಾ – ಉಕ್ರೇನ್‌ ಡ್ರೋನ್ ದಾಳಿ

Published 19 ಮೇ 2024, 14:20 IST
Last Updated 19 ಮೇ 2024, 14:20 IST
ಅಕ್ಷರ ಗಾತ್ರ

ಕೈವ್ : ರಷ್ಯಾ ಮತ್ತು ಉಕ್ರೇನ್‌ ನಡುವೆ ದಾಳಿ ಮತ್ತು ಪ್ರತಿ ದಾಳಿ ಮುಂದುವರಿದಿದೆ. ಉಕ್ರೇನ್‌ನ ಸುಮಾರು 60 ಡ್ರೋನ್‌ಗಳು ಮತ್ತು ಹಲವು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾ ಪ್ರತಿಪಾದಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಉಕ್ರೇನ್‌, ರಷ್ಯಾದ 30 ಡ್ರೋನ್‌ಗಳನ್ನು ನಾಶಪಡಿಸಿರುವುದಾಗಿ ತಿಳಿಸಿದೆ.

ಸ್ಲಾವಿಯನ್ಸ್ಕ್‌-ಆನ್-ಕುಬನ್ ಪಟ್ಟಣದಲ್ಲಿರುವ ತೈಲ ಸಂಸ್ಕರಣಾ ಘಟಕಕ್ಕೆ ಡ್ರೋನ್ ಅವಶೇಷಗಳು ಅಪ್ಪಳಿಸಿದ್ದು, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಉಕ್ರೇನ್‌ನ ಡ್ರೋನ್ ದಾಳಿಯಿಂದ ಶುಕ್ರವಾರ ಬೆಳಿಗ್ಗೆ ರಷ್ಯಾದ ಸೆವಾಸ್ಟೊಪೋಲ್ ನಗರದಲ್ಲಿ ವಿದ್ಯುತ್ ಕಡಿತವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT