ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Russia–Ukraine Conflict | ಸೇನಾ ಮುಖ್ಯಸ್ಥನ ವಜಾಕ್ಕೆ ಚಿಂತನೆ: ಝೆಲೆನ್‌ಸ್ಕಿ

Published 5 ಫೆಬ್ರುವರಿ 2024, 15:29 IST
Last Updated 5 ಫೆಬ್ರುವರಿ 2024, 15:29 IST
ಅಕ್ಷರ ಗಾತ್ರ

ಕೀವ್‌: ಉಕ್ರೇನ್‌ನ ಸೇನಾ ಮುಖ್ಯಸ್ಥರನ್ನು ವಜಾಗೊಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ತಿಳಿಸಿದ್ದಾರೆ.

ಇಟಲಿಯ ಟಿ.ವಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಜನರಲ್‌ ವಲೇರಿ ಝಲುಝ್ನಿ ಅವರನ್ನು ವಜಾಗೊಳಿಸಲಾಗುತ್ತದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ‘ಬದಲಾವಣೆ ಮತ್ತು ಹೊಸ ಆರಂಭ ಅಗತ್ಯವಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಂಬಂಧಿಸಿದ್ದಲ್ಲ, ರಾಷ್ಟ್ರದ ನಾಯಕತ್ವಕ್ಕೆ ಸಂಬಂಧಿಸಿದ್ದು. ನಾವು ‌ಕೇವಲ ಒಬ್ಬ ವ್ಯಕ್ತಿಯನ್ನು ಬದಲಾಯಿಸುತ್ತಿಲ್ಲ. ರಕ್ಷಣಾ ಇಲಾಖೆ ಅಷ್ಟೇ ಅಲ್ಲದೆ, ಹಲವಾರು ಇಲಾಖೆಗಳ ಮುಖ್ಯಸ್ಥರನ್ನು ಬದಲಾಯಿಸಲಾಗುತ್ತದೆ‘ ಎಂದರು.

‘ಸೇನಾ ಮುಖ್ಯಸ್ಥನ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಝೆಲೆನ್ಸ್ಕಿ ಅವರು ಝಲುಝ್ನಿ ಅವರಿಗೆ ಕಳೆದ ವಾರ ಸೂಚಿಸಿದ್ದರು. ಆದರೆ, ಝಲುಝ್ನಿ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ’ ಎಂದು ಉಕ್ರೇನ್‌ ಮತ್ತು ಪಾಶ್ಚಿಮಾತ್ಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT