ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ಜತೆ ವ್ಯಾಪಾರ ಸ್ಥಗಿತಗೊಳಿಸುವಂತೆ ಡಚ್ ಸಂಸತ್‌ಗೆ ಉಕ್ರೇನ್ ಅಧ್ಯಕ್ಷ ಒತ್ತಾಯ

Last Updated 31 ಮಾರ್ಚ್ 2022, 9:58 IST
ಅಕ್ಷರ ಗಾತ್ರ

ಕೀವ್: ರಷ್ಯಾದೊಂದಿಗೆ ವ್ಯಾಪಾರ –ವಹಿವಾಟನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಡಚ್‌ ಸಂಸತ್ತಿಗೆ (ನೆದರ್ಲೆಂಡ್ಸ್) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಒತ್ತಾಯಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಝೆಲೆನ್‌ಸ್ಕಿ, ‘ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಪ್ರತಿಯಾಗಿ ಆ ರಾಷ್ಟ್ರದಿಂದ ಶಸ್ತ್ರಾಸ್ತ್ರಗಳು, ಪುನರ್‌ ನಿರ್ಮಾಣ ನೆರವು ಸೇರಿದಂತೆ ವ್ಯಾಪಾರ ವಹಿವಾಟನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಡಚ್‌ ಸಂಸತ್ತಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.

ಯುರೋಪ್‌ನಲ್ಲಿ ಯುದ್ಧವನ್ನು ಮುಂದುವರಿಸಲು ರಷ್ಯಾಕ್ಕೆ ಅವಕಾಶ ನೀಡದಂತೆ ಬಲವಾದ ನಿರ್ಬಂಧಗಳನ್ನು ಹೇರುವ ಅಗತ್ಯವಿದೆ ಎಂದು ಝೆಲೆನ್‌ಸ್ಕಿ ಒತ್ತಾಯಿಸಿದ್ದಾರೆ.

ಉಕ್ರೇನ್‌ ಮೇಲೆ ರಷ್ಯಾ ಸತತ ಎರಡು ತಿಂಗಳಿನಿಂದ ದಾಳಿ ನಡೆಸುತ್ತಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಸೈನಿಕರು ಸೇರಿದಂತೆ ನಾಗರಿಕರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT