ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡಿ: ಹಮಾಸ್‌ಗೆ ಯುಎನ್ ಮುಖ್ಯಸ್ಥರ ಕರೆ

ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹಮಾಸ್‌ಗೆ ಯುಎನ್ ಮುಖ್ಯಸ್ಥ ಗುಟೆರೆಸ್ ಕರೆ ನೀಡಿದ್ದಾರೆ.
Published 16 ಅಕ್ಟೋಬರ್ 2023, 5:33 IST
Last Updated 16 ಅಕ್ಟೋಬರ್ 2023, 5:33 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಯುಎಸ್): ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ.

ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿಯ ಮಧ್ಯೆ ಗುಟೆರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಎರಡು ಮಾನವೀಯ ಮನವಿ ಮಾಡಿದ್ದಾರೆ. ಮೊದಲನೆಯದಾಗಿ "ಹಮಾಸ್‌ ಒತ್ತೆಯಾಳುಗಳನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು". ಎರಡನೆಯದಾಗಿ "ಗಾಜಾದಲ್ಲಿರುವ ನಾಗರಿಕರ ಸಹಾಯಕ್ಕೆ ಇಸ್ರೇಲ್‌ ತಕ್ಷಣ ಧಾವಿಸಬೇಕು" ಎಂದು ಗುಟೆರೆಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಇತ್ತೀಚಿನ ಮಾಹಿತಿಯ ಪ್ರಕಾರ ಇಸ್ರೇಲ್‌–ಹಮಾಸ್ ಸಂರ್ಘದಲ್ಲಿ ಸುಮಾರು ‌1,300 ಜನರು ಮೃತಪಟ್ಟು, 3,600ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಅಂದಾಜಿನ ಪ್ರಕಾರ, ಗಾಜಾ ಪಟ್ಟಿಯಲ್ಲಿ 150ರಿಂದ 200 ಮಂದಿ ಇಸ್ರೇಲಿಗಳನ್ನು ಹಮಾಸ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದೆ ಎಂದು ರಕ್ಷಣಾ ಸಚಿವ ಗ್ಯಾಲಂಟ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT