ಕೈರೊ: ಸುಡಾನ್‌ನಲ್ಲಿ ಸಂಭವಿಸಿದ ಪ್ರವಾಹದಿಂದ 50 ಸಾವಿರಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಹಲವಾರು ಕಟ್ಟಡಗಳು ನಾಶವಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ.

ಕಳೆದ ಹಲವು ದಿನಗಳಿಂದ ಸುಡಾನ್‌ನ 14 ಪ್ರಾಂತ್ಯಗಳಲ್ಲಿ ಪ್ರವಾಹ ಸಂಭವಿಸಿದ್ದು, ಸಂತ್ರಸ್ತರು ಸೂರು ಮತ್ತು ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಕಳೆದ ಒಂದೆರಡು ದಿನಗಳಿಂದ ಉತ್ತರ ಡಾರ್ಫರ್, ವೈಟ್ ನೈಲ್, ಸೆನಾರ್, ಕಲ್ಸಾಲಾ ರಾಜ್ಯಗಳಲ್ಲೂ ಪ್ರವಾಹ ಉಂಟಾಗಿದೆ ಎಂದು ವಿಶ್ವಸಂಸ್ಥೆಯಮಾನವೀಯ ವ್ಯವಹಾರಗಳ ಸಮಿತಿ ತಿಳಿಸಿದೆ.

ಉತ್ತರ ಡಾರ್ಫರ್‌ನ ಅಲ್ ಲಲೈತ್‌ಪ್ರದೇಶದಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ600 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಅವರಿಗೆ ಆಹಾರ ಮತ್ತುಆಶ್ರಯದ ಅವಶ್ಯಕತೆ ಇದೆ’ ಎಂದು ತಿಳಿಸಿದೆ.

ದೇಶದಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸುಡಾನ್‌ನಲ್ಲಿ ಮತ್ತೆ ಪ್ರವಾಹ ಸಂಭವಿಸುವ ನಿರೀಕ್ಷೆ ಇದೆ ಎಂದು ಸುಡಾನ್‌ನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.