ಲಂಡನ್: ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಕ್ ಹಾಗೂ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಸಂಸತ್ತಿನ ಕಳಂಕಿತ ಸದಸ್ಯರೊಬ್ಬರನ್ನು ಪ್ರಮುಖ ಹುದ್ದೆಗೆ ನೇಮಿಸುವಂತೆ ಪ್ರಧಾನಿ ಬೋರಿಸ್ ಜಾನ್ಸನ್ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಈ ಬೆಳವಣಿಗೆ ನಡೆದಿದ್ದು ಬ್ರಿಟನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.

ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿರುವ ಸುನಕ್, ‘ಸರ್ಕಾರವು ಸರಿಯಾಗಿ, ಸಮರ್ಥವಾಗಿ ಮತ್ತು ಗಂಭೀರವಾಗಿ ನಡೆಯಬೇಕೆಂದು ಜನರು ನಿರೀಕ್ಷಿಸುತ್ತಾರೆ. ಇದು ನನ್ನ ಕೊನೆಯ ಸರ್ಕಾರಿ ಹುದ್ದೆ ಎಂದು ಹೇಳಲು ಬಯಸುತ್ತೇನೆ. ನನ್ನ ಹೋರಾಟಕ್ಕೆ ಇದು ಮಾನದಂಡವಾಗಲಿದೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಪ್ರಧಾನಿಗೆ ಬರೆದ ನನ್ನ ಪತ್ರ ಕೆಳಗಿದೆ’ ಎಂದು ತಿಳಿಸಿದ್ದಾರೆ.

ರಿಷಿ ಅವರು 2015ರಲ್ಲಿ ಬ್ರಿಟನ್ ಸಂಸತ್ತನ್ನು ಪ್ರವೇಶಿಸಿದ್ದರು. 2020ರಲ್ಲಿ, ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವ ಹುದ್ದೆಗೇರಿದರು. ಈ ಹುದ್ದೆಗೇರಿದ ಭಾರತ ಮೂಲದ ಪ್ರಥಮ ವ್ಯಕ್ತಿ ರಿಷಿ.

ಕೋವಿಡ್–19 ಸಾಂಕ್ರಾಮಿಕದಿಂದ ಬ್ರಿಟನ್ ತತ್ತರಿಸುತ್ತಿದ್ದ ವೇಳೆ ರಿಷಿ ಅವರು ದೇಶದ ಆರ್ಥಿಕತೆಯನ್ನು ನಿರ್ವಹಿಸುವಲ್ಲಿ ಯಶಸ್ವಿ ಆಗಿದ್ದರು. ರಿಷಿ ಅವರು ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.