ಯಾಂಗೋನ್: ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಸೇನಾಡಳಿತ ಭದ್ರತಾ ಪಡೆಗಳ ಮೂಲಕ ಅಶ್ರುವಾಯು, ರಬ್ಬರ್ ಬುಲೆಟ್, ಗುಂಡಿನ ದಾಳಿ ನಡೆಸುತ್ತಿದೆ. ಬುಧವಾರ ನಡೆದ ಹಿಂಸಾಚಾರದಲ್ಲಿ 38 ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಮ್ಯಾನ್ಮಾರ್‌ನಲ್ಲಿ ಎಷ್ಟು ಜನ ಸಾವಿಗೀಡಾಗಿದ್ದಾರೆ ಎನ್ನುವುದು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ, ಬುಧವಾರ 38 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ಕಳವಳ ವ್ಯಕ್ತಪಡಿಸಿದೆ’ ವಿಶ್ವಸಂಸ್ಥೆ ಅಧಿಕಾರಿಗಳು ಸ್ವಿಟ್ಜರ್ಲೆಂಡ್‌ನಲ್ಲಿ ತಿಳಿಸಿದ್ದಾರೆ.

ಕಳೆದ ತಿಂಗಳು ನಡೆದ ಮಿಲಿಟರಿ ಕ್ಷಿಪ್ರ ದಂಗೆ ವಿರೋಧಿಸಿ ದೇಶದಾದ್ಯಂತ ನಾಗರಿಕರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಬಹುತೇಕ ನಗರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಜನರನ್ನು ಚದುರಿಸಲು ಭದ್ರತಾ ಪಡೆಗಳು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದು, ಪತ್ರಕರ್ತರು ಸೇರಿದಂತೆ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ. ಮ್ಯಾನ್ಮಾರ್‌ನಲ್ಲಿ ಬಿಕ್ಕಟ್ಟು ಬಗೆಹರಿಸುವಂತೆ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಒತ್ತಡವೂ ಹೆಚ್ಚಾಗಿರುವುದರಿಂದ ಭದ್ರತಾ ಮಂಡಳಿ ಸಭೆ ಮಹತ್ವ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.