ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಭಾಯಿಸುವಲ್ಲಿ ವಿಫಲವಾಗುತ್ತಿದ್ದೇವೆ: ಅಮೆರಿಕ ಆರೋಗ್ಯಾಧಿಕಾರಿ ಹೇಳಿಕೆ

Last Updated 9 ಆಗಸ್ಟ್ 2021, 6:16 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕೋವಿಡ್–19 ಪರಿಸ್ಥಿತಿ ನಿಭಾಯಿಸುವಲ್ಲಿ ಅಮೆರಿಕ ವಿಫಲವಾಗುತ್ತಿದೆ ಎಂದು ಅಲ್ಲಿನ ಉನ್ನತ ಆರೋಗ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

ಆರು ತಿಂಗಳುಗಳಲ್ಲೇ ಅತಿಹೆಚ್ಚು ದೈನಂದಿನ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರದಿಂದಾಗಿ ಅಮೆರಿಕದಲ್ಲಿ ಸೋಂಕಿತರಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಒಟ್ಟು ದೈನಂದಿನ ಪ್ರಕರಣಗಳ ಸಂಖ್ಯೆ 1,18,000 ತಲುಪಿದ್ದು, ಇದು ಕಳೆದ ಫೆಬ್ರುವರಿ ಬಳಿಕ ಅತಿಹೆಚ್ಚಿನದ್ದಾಗಿದೆ. ಕಳೆದೆರಡು ವಾರಗಳಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಫ್ಲಾರಿಡಾದಲ್ಲಿ ಆಸ್ಪತ್ರೆಗೆ ದಾಖಲಾಗುವ ಯುವಕರ ಸಂಖ್ಯೆ ಏರಿಕೆಯಾಗಿದೆ.

‘ಈ ಸ್ಥಿತಿಯಲ್ಲಿ ನಾವು ಇರಬಾರದಿತ್ತು. ಹೌದು, ಈ ವಿಚಾರದಲ್ಲಿ ನಾವು ವಿಫಲರಾಗುತ್ತಿದ್ದೇವೆ’ ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳ ನಿರ್ದೇಶಕ ಫ್ರಾನ್ಸಿಸ್ ಕಾಲಿನ್ಸ್ ಹೇಳಿದ್ದಾರೆ.

‘ನಾವೀಗ ಭಯಾನಕ ಸ್ಥಿತಿಯಲ್ಲಿದ್ದೇವೆ’ ಎಂದೂ ಅವರು ಹೇಳಿದ್ದಾರೆ.

ಲಕ್ಷಾಂತರ ಮಂದಿ ಇನ್ನೂ ಕೋವಿಡ್ ಲಸಿಕೆ ಪಡೆದಿರುವ ಸಾಧ್ಯತೆ ಇಲ್ಲ. ಜತೆಗೆ ಡೆಲ್ಟಾ ರೂಪಾಂತರ ವೈರಸ್ ವೇಗವಾಗಿ ಹರಡುತ್ತಿರುವುದು ಸೋಂಕು ಪ್ರಕರಣಗಳ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT