ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಫಲಿತಾಂಶಕ್ಕೆ ಹೆಚ್ಚು ಸಮಯ ಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ.

ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಇಂಡಿಯಾನದಲ್ಲಿ ಗೆಲುವು ಸಾಧಿಸಿದ್ದು, ಕೆಂಟುಕಿ ಹಾಗೂ ಪಶ್ಚಿಮ ವರ್ಜೀನಿಯಾದಲ್ಲಿ ಮುನ್ನಡೆ ಸಾಧಿಸಿದ್ದಾರೆ. ವೆರ್ಮೊಂಟ್ ಮತ್ತು ವರ್ಜೀನಿಯಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೊ ಬೈಡೆನ್ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ.

ಕೆಂಟುಕಿಯಲ್ಲಿ ರಿಪಬ್ಲಿಕನ್ ಸೆನೆಟರ್ ಮಿಚ್ ಮೆಕಾನ್ನೆಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಸತತ ಏಳನೇ ಬಾರಿಗೆ ಅವರು ಜಯಗಳಿಸಿದಂತಾಗಿದೆ.

ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ, ಸುಮಾರು 23.9 ಕೋಟಿ ಅರ್ಹ ಮತದಾರರ ಪೈಕಿ ಮೂರನೇ ಒಂದರಷ್ಟು ಮಂದಿ ಮುಂಚಿತ ಮತದಾನದ ಮೊರೆ ಹೋಗಿದ್ದಾರೆ. ಸುಮಾರು 10 ಕೋಟಿಯಷ್ಟು ಜನರು ಮುಂಚಿತ ಮತದಾನದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಇದನ್ನೂ ಓದಿ:ಅಮೆರಿಕ: 9.96 ಕೋಟಿ ಮುಂಚಿತ ಮತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.