ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಯೆಟ್ನಾಂ: ಅಗ್ನಿ ದುರಂತ, 56 ಮಂದಿ ಸಾವು

Published 13 ಸೆಪ್ಟೆಂಬರ್ 2023, 12:56 IST
Last Updated 13 ಸೆಪ್ಟೆಂಬರ್ 2023, 12:56 IST
ಅಕ್ಷರ ಗಾತ್ರ

ಹನೋಯಿ: ವಿಯೆಟ್ನಾಂನ ರಾಜಧಾನಿ ಹನೋಯಿಯ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮಕ್ಕಳು ಸೇರಿ ಕನಿಷ್ಠ 56 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ನೀಡಿರುವ ಮಾಹಿತಿ ಆಧರಿಸಿ ಅಲ್ಲಿಯ ಸ್ಥಳೀಯ ಸುದ್ದಿಸಂಸ್ಥೆ ಬುಧವಾರ ವರದಿ ಮಾಡಿದೆ.  

ಸುಮಾರು 150 ಜನರು ವಾಸವಿದ್ದ 9 ಅಂತಸ್ತಿನ ಕಟ್ಟಡಲ್ಲಿ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಮೃತರ ಪೈಕಿ 39 ಸಂತ್ರಸ್ತರ ಗುರುತು ಪತ್ತೆಯಾಗಿದೆ ಎಂದು ವಿಯೆಟ್ನಾಂ ನ್ಯೂಸ್‌ ಏಜೆನ್ಸಿ (ವಿಎನ್‌ಎ) ವರದಿ ಮಾಡಿದೆ.

ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ. ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT