ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಅಮೆರಿಕ ನಡುವೆ ಈ ತಿಂಗಳಲ್ಲಿ 2+2 ಸಚಿವರ ಮಾತುಕತೆ

Published 2 ನವೆಂಬರ್ 2023, 14:04 IST
Last Updated 2 ನವೆಂಬರ್ 2023, 14:04 IST
ಅಕ್ಷರ ಗಾತ್ರ

ವಾಷಿಂಗ್ಟನ್ : ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಜೊತೆಗೆ 2+2 ಸಚಿವರ ಹಂತದ ಮಾತುಕತೆ ನಡೆಸಲು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಹಾಗೂ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಈ ತಿಂಗಳಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಮೆರಿಕ ತಿಳಿಸಿದೆ. 

ಈ ಕುರಿತು ಬುಧವಾರ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಮ್ಯಾಥ್ಯೂ ಮಿಲ್ಲರ್, ‘ಬ್ಲಿಂಕನ್ ಅವರು ನವೆಂಬರ್ 2ರಿಂದ 10ರವರೆಗೆ ಇಸ್ರೇಲ್ ಮತ್ತು ಜೋರ್ಡಾನ್ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಬಳಿಕ ಜಪಾನ್, ದಕ್ಷಿಣ ಕೊರಿಯಾ ಮತ್ತು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದರು. 

ಬ್ಲಿಂಕನ್ ಮತ್ತು ಲಾಯ್ಡ್ ಆಸ್ಟಿನ್ ಅವರು ಯಾವ ದಿನ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬುದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಭಾರತ ಮತ್ತು ಅಮೆರಿಕದ ನಿಯೋಗಗಳು 2+2 ಸಚಿವರ ಮಾತುಕತೆ ಸಭೆಯಲ್ಲಿ ಭಾಗವಹಿಸಲಿವೆ. ಉಭಯ ದೇಶಗಳ ದ್ವಿಪಕ್ಷೀಯ ಮಾತುಕತೆ, ಜಾಗತಿಕ ವಿಚಾರಗಳು ಹಾಗೂ ಹಿಂದೂ ಮಹಾಸಾಗರ–ಪೆಸಿಫಿಕ್ ಮಹಾಸಾಗರ ಪ್ರದೇಶದ ಅಭಿವೃದ್ಧಿ ವಿಚಾರಗಳ ಕುರಿತು ಎರಡೂ ದೇಶಗಳ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ ಎಂದು ಮಿಲ್ಲರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT