ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಿ: ಪಾಕ್‌ಗೆ ಅಮೆರಿಕ ಸಲಹೆ

Published 14 ಸೆಪ್ಟೆಂಬರ್ 2023, 12:56 IST
Last Updated 14 ಸೆಪ್ಟೆಂಬರ್ 2023, 12:56 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಪಿಟಿಐ): ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಸಕಾಲದಲ್ಲಿ ಚುನಾವಣೆ ನಡೆಸಿ ಎಂದು ಪಾಕಿಸ್ತಾನಕ್ಕೆ ಅಮೆರಿಕ ಸಲಹೆ ನೀಡಿದೆ.

ಅಲ್ಲದೇ, ‘ಮಾನವ ಹಕ್ಕುಗಳು, ಮೂಲಭೂತ ಸ್ವಾತಂತ್ರ್ಯ ಹಾಗೂ ಕಾನೂನಿನ ನಿಯಮಾವಳಿಗಳನ್ನು ಗೌರವಿಸಬೇಕು’ ಎಂದೂ ಅದು ಪಾಕಿಸ್ತಾನವನ್ನು ಕೇಳಿಕೊಂಡಿದೆ.

ನವೆಂಬರ್‌ 6ರಂದು ಚುನಾವಣೆ ನಡೆಸುವಂತೆ ಪಾಕಿಸ್ತಾನದ ಅಧ್ಯಕ್ಷ ಆರಿಫ್‌ ಅಲ್ವಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಈ ರೀತಿ ಪ್ರತಿಕ್ರಿಯಿಸಿದರು.

‘ಪಾಕಿಸ್ತಾನದ ಕಾನೂನುಗಳಿಗೆ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಿ’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT