ಟೆಹರಾನ್: ಇರಾನ್ನ ಪ್ರಮುಖ ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪದ ಮೇಲಿರುವ ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಅಲ್ಲದೆ, ಹೊರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ಇರಾನ್ ಅಡ್ಡಿಪಡಿಸುವುದನ್ನು ಮುಂದುವರಿಸಿದರೆ, ಮುಂದಿನ ಗುರಿ ಇರಾನ್ನ ತೈಲ ಮೂಲಸೌಕರ್ಯಗಳೇ ಆಗಲಿವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿದೆ.

ಇರಾನ್–ಇಸ್ರೇಲ್ ಯುದ್ಧ ಆರಂಭವಾಗಿ ಸುಮಾರು ಎರಡು ವಾರ ಕಳೆಯುತ್ತಾ ಬಂದಿದೆ. ಪಶ್ಚಿಮ ಏಷ್ಯಾಕ್ಕೆ ಇನ್ನಷ್ಟು ಸೈನಿಕರನ್ನು ಮತ್ತು ಯುದ್ಧ ನೌಕೆಗಳನ್ನು ಕಳುಹಿಸುವುದಾಗಿ ಅಮೆರಿಕದ ತಿಳಿಸಿದೆ. ಆ ಮೂಲಕ ಯುದ್ಧ ಮುಂದುವರಿಯುವ ಸೂಚನೆ ನೀಡಿದೆ.

ಏತನ್ಮಧ್ಯೆ, ಹೊರ್ಮುಜ್ ಜಲಸಂಧಿಯನ್ನು ಇರಾನ್ ತನ್ನ ಹತೋಟಿಗೆ ತಂದುಕೊಂಡಿದೆ. ಅಲ್ಲದೆ ಇಸ್ರೇಲ್ ಮತ್ತು ನೆರೆಯ ರಾಷ್ಟ್ರಗಳ ಮೇಲೆ ಕ್ಷಿಪಣಿ ಮತ್ತು ಡ್ರೋಣ್ ದಾಳಿಗಳನ್ನು ಮುಂದುವರಿಸಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಮತ್ತು ಇಸ್ರೇಲ್, ಇರಾನ್ನ ಸೇನಾ ನೆಲೆಗಳ ಮೇಲೆ ಭೀಕರ ದಾಳಿ ನಡೆಸುತ್ತಿವೆ.

ಇನ್ನೊಂದೆಡೆ, ಲೆಬನಾನ್ನಲ್ಲಿ ಮಾನವೀಯ ಬಿಕ್ಕಟ್ಟು ತೀವ್ರಗೊಂಡಿದೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ವಿರುದ್ಧ ಇಸ್ರೇಲ್ ಸರಣಿ ದಾಳಿಗಳನ್ನು ನಡೆಸುತ್ತಿದ್ದು, ಸುಮಾರು 800 ಜನರು ಮೃತಪಟ್ಟು, 8,50,000 ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.