ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ

Published 26 ಮೇ 2023, 4:35 IST
Last Updated 26 ಮೇ 2023, 4:35 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್‌ ಜೆ ಅಸ್ಟಿನ್‌ ||| ಅವರು ಭಾರತ ಸೇರಿ ನಾಲ್ಕು ದೇಶಗಳ ಪ್ರವಾಸವನ್ನು ಮುಂದಿನ ವಾರದಿಂದ ಕೈಗೊಳ್ಳಲಿದ್ದಾರೆ ಎಂದು ಅಮೆರಿಕದ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ.

ಮೊದಲು ಅವರು ಜಪಾನ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಜಪಾನ್‌ ರಕ್ಷಣಾ ಸಚಿವ ಯಸುಕಸು ಹಮದಾ ಹಾಗೂ ಇನ್ನಿತರ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿರುವ ಅಮೆರಿಕ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.

ಬಳಿಕ ಸಿಂಗಪುರಕ್ಕೆ ಪ್ರಯಾಣ ಬೆಳೆಸಲಿರುವ ಅವರು, ಅಲ್ಲಿನ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಲಿರುವವರು. ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವದ ಬಗ್ಗೆ ಚರ್ಚೆ ನಡೆಯಲಿದೆ.

ತದನಂತರ ಭಾರತಕ್ಕೆ ಭೇಟಿ ನೀಡಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹಾಗೂ ಇನ್ನಿತರ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವವನ್ನು ಆಧುನೀಕರಣಗೊಳಿಸುವ ಬಗ್ಗೆ ಮಾತುಕತೆ ನಡೆಯಲಿದೆ.

ಬಳಿಕ ಅವರು ಫ್ರಾನ್ಸ್‌ಗೆ ತೆರಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT