ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಪ್ರಕರಣ: ನ್ಯಾಯಯುತ ತನಿಖೆ ನಡೆಯಲಿ-ಅಮೆರಿಕ

Published 26 ಮಾರ್ಚ್ 2024, 13:43 IST
Last Updated 26 ಮಾರ್ಚ್ 2024, 13:43 IST
ಅಕ್ಷರ ಗಾತ್ರ

ವಾಷಿಂಗ್ಟನ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಕಾನೂನು ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಅಮೆರಿಕ ಪ್ರತಿಕ್ರಿಯಿಸಿದೆ.

ಈ ಬಂಧನಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು  ಹೇಳಿದ್ದಾರೆ. ಕೇಜ್ರಿವಾಲ್‌ ಬಂಧನ ಕುರಿತು ಜರ್ಮನಿ ನೀಡಿದ್ದ ಹೇಳಿಕೆಗೆ ಭಾರತದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಕಾನೂನು ಪ್ರಕ್ರಿಯೆಯು ನ್ಯಾಯಯುತ ಮತ್ತು ಪಾರದರ್ಶಕವಾಗಿರಬೇಕು. ಸಕಾಲದಲ್ಲಿ ಮುಗಿಯಬೇಕು ಎಂದು ನಾವು ಬಯಸುತ್ತೇವೆ ಎಂದು ವಕ್ತಾರರು ಈ ಕುರಿತ ಇ–ಮೇಲ್‌ಗೆ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT