ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕದ ಲಾಸ್ ವೇಗಾಸ್‌ನಲ್ಲಿ ಶೂಟೌಟ್: ಐವರು ಸಾವು

Published 26 ಜೂನ್ 2024, 2:57 IST
Last Updated 26 ಜೂನ್ 2024, 2:57 IST
ಅಕ್ಷರ ಗಾತ್ರ

ಲಾಸ್ ವೇಗಾಸ್: ಅಮೆರಿಕಾದ ಲಾಸ್ ವೇಗಾಸ್‌ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ರಾತ್ರಿ ಈ ದಾಳಿ ನಡೆದಿದ್ದ 13 ವರ್ಷದ ಬಾಲಕಿ ಸೇರಿದಂತೆ ಇಬ್ಬರು 50 ವರ್ಷದ ಮಹಿಳೆಯರು ಮೃತಪಟ್ಟಿದ್ದಾರೆ. ಮತ್ತೆ ಇಬ್ಬರು ಗುರುತು ಪತ್ತೆಯಾಗಿಲ್ಲ ಎಂದು ಸಿಎನ್‌ಎಸ್‌ ಟಿ.ವಿ ವರದಿ ಮಾಡಿದೆ.

ದಾಳಿಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. 

ಗುಂಡಿನ ದಾಳಿ ನಡೆಸಿದ ಆರೋಪಿಯು ಈ ಘಟನೆ ಬಳಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ. 

ಮೃತ ವ್ಯಕ್ತಿಯನ್ನು ರಿಚ್ ಆ್ಯಡಮ್‌ (47) ಎಂದು ಗುರುತಿಸಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT