ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ಅನಾರೋಗ್ಯದ ಕಾರಣ ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

'ಗುರುವಾರ ಸಂಜೆ ಕ್ಲಿಂಟನ್ ಅವರು ಯುಸಿಐ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು' ಎಂದು ಕ್ಲಿಂಟನ್ ಅವರ ವಕ್ತಾರ ಏಂಜೆಲ್ ಉರೆನಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

75 ವರ್ಷದ ಕ್ಲಿಂಟನ್ ಅವರುಕೋವಿಡ್-19 ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿಲ್ಲ ಎಂಬುದನ್ನು ಹೊರತು ಪಡಿಸಿ ಬೇರೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕ್ಲಿಂಟನ್ ಅವರು ಅಮೆರಿಕದ 42ನೇ ಅಧ್ಯಕ್ಷರಾಗಿ 1993 ರಿಂದ 2001ರ ವರೆಗೆ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.