ಜಾರ್ಜಿಯಾ: ಅಮೆರಿಕದ ಜಾರ್ಜಿಯಾದ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಗುಂಡು ಹಾರಿಸಿದ ವಿದ್ಯಾರ್ಥಿಯನ್ನು ಜಾರ್ಜಿಯಾದ ವಿಂಡರ್‌ನಲ್ಲಿರುವ ಅಪಾಲಾಚಿ ಹೈಸ್ಕೂಲ್‌ನ ವಿದ್ಯಾರ್ಥಿ 14 ವರ್ಷದ ಕೋಲ್ಟ್ ಕ್ರೇ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಲ್ಲಿ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಲು ಪ್ರಚೋದನೆ ನೀಡಿದ್ದು ಯಾರು ಎನ್ನುವುದನ್ನು ಪತ್ತೆ ಮಾಡುವುದಾಗಿ ಹೇಳಿದ್ದಾರೆ ಎಂದು ಈ ಕುರಿತು ಸಿಎನ್‌ಎನ್ ವರದಿ ಮಾಡಿದೆ.