ನ್ಯೂಯಾರ್ಕ್: ದ್ವಿಪಕ್ಷೀಯ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ದ್ವಿಪಕ್ಷೀಯ ಪಾಲುದಾರಿಕೆ ಮತ್ತು ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.

ಭೇಟಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕ್ವಾಡ್ ವಿದೇಶಾಂಗ ಮಂತ್ರಿಗಳ ಸಭೆಯ ಹೊರತಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಭೇಟಿ ಮಾಡಿದ್ದು ಸಂತಸವಾಯಿತು ಎಂದು ತಿಳಿಸಿದ್ದಾರೆ.
.ಪಹಲ್ಗಾಮ್ ದಾಳಿಯ ಉದ್ದೇಶ ಪ್ರವಾಸೋದ್ಯಮ ನಾಶ: ಜೈಶಂಕರ್.ಭಯೋತ್ಪಾದಕ ದಾಳಿ ಪ್ರಚೋದಿಸಿದರೆ ಪಾಕ್ ಒಳನುಗ್ಗಿ ಭಾರತದಿಂದ ಪ್ರತೀಕಾರ: ಜೈಶಂಕರ್.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ಕಡಿತ.ನಂದಿಯಲ್ಲಿ ಸಚಿವ ಸಂಪುಟ: ಬಯಲು ಸೀಮೆ ಜಿಲ್ಲೆಗಳ ಜನರಲ್ಲಿ ಹೆಚ್ಚಿದ ನಿರೀಕ್ಷೆ.
ವ್ಯಾಪಾರ, ಭದ್ರತೆ, ನಿರ್ಣಾಯಕ ತಂತ್ರಜ್ಞಾನಗಳು, ಇಂಧನ ಮತ್ತು ಚಲನಶೀಲತೆ, ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳು ಸೇರಿದಂತೆ ಭಾರತ-ಅಮೆರಿಕ ದ್ವಿಪಕ್ಷೀಯ ಪಾಲುದಾರಿಕೆಯ ಕುರಿತು ಚರ್ಚಿಸಲಾಯಿತು ಎಂದು ಜೈಶಂಕರ್ ಹೇಳಿದ್ದಾರೆ.

ಇದೇ ವೇಳೆ ಜೈಶಂಕರ್ ಅವರು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರನ್ನು ಭೇಟಿಯಾಗಿ ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಪಾಲುದಾರಿಕೆಯನ್ನು ಮುಂದುವರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
.ಪಾಕ್ನಲ್ಲಿ ಭಯೋತ್ಪಾದನೆಯು 'ಮುಕ್ತ ವ್ಯವಹಾರ’: ಜರ್ಮನಿಯಲ್ಲಿ ಗುಡುಗಿದ ಜೈಶಂಕರ್.ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ.ಕಳ್ಳತನ ಮಾಡಿದ್ದ 30 ಲ್ಯಾಪ್ಟಾಪ್, ಐ–ಫೋನ್ ಜಪ್ತಿ.ನ್ಯಾಯಯುತವಲ್ಲದ ವೈದ್ಯಕೀಯ ಪ್ರಯೋಗ: ತನಿಖೆಗೆ ಮನವಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.