ವಾಷಿಂಗ್ಟನ್: ಸಂವಹನ ಕೊರತೆಯಿಂದ ಅಮೆರಿಕ ಮತ್ತು ಭಾರತ ನಡುವೆ ವ್ಯಾಪಾರ ಒಪ್ಪಂದ ವಿಫಲವಾಗಿದೆ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.

ಪಾಡ್ಕಾಸ್ಟ್ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಲುಟ್ನಿಕ್, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಮಾತನಾಡದ ಕಾರಣ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಹೇಳಿದ್ದಾರೆ.

‘ನಾನಿದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಅದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒಪ್ಪಂದವಾಗಿತ್ತು. ಅದಕ್ಕಾಗಿ ಎಲ್ಲವನ್ನು ಮಾಡಿದ್ದರು. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಆದರೆ ಮೋದಿ ಕರೆ ಮಾಡಿರಲಿಲ್ಲ. ಅದಾದ ಬಳಿಕ ನಾವು ಮುಂದುವರಿದೆವು. ಮುಂದಿನ ವಾರ ಇಂಡೋನೇಷ್ಯಾ, ಫಿಲಿಪ್ಪೀನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಘೋಷಿಸಿದೆವು’ ಎಂದು ಲುಟ್ನಿಕ್ ಸ್ಪಷ್ಟನೆ ನೀಡಿದ್ದಾರೆ.

ಈಗಾಗಲೇ ಐರೋಪ್ಯ ಒಕ್ಕೂಟ, ಯುನೈಟೆಡ್ ಕಿಂಗ್ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ವ್ಯಾಪಾರ ಮಾತುಕತೆಯನ್ನು ಅಮೆರಿಕ ಮುಕ್ತಾಯಗೊಳಿಸಿದೆ.

ಪ್ರಸ್ತುತ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಅಮೆರಿಕ ಶೇ.50ರಷ್ಟು ಸುಂಕ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.