ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ವಿದೇಶಿ ಶಕ್ತಿಗಳು ಹಸ್ತಕ್ಷೇಪ ಮಾಡುತ್ತಿವೆ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಮುಖ್ಯಸ್ಥ ವಿಲಿಯಂ ಇವಾನಿನಾ ಎಚ್ಚರಿಕೆ ನೀಡಿದ್ದಾರೆ.

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರ ಹೆಸರಿಗೆ ಧಕ್ಕೆ ತರಲು ರಷ್ಯಾ ಪ್ರಯತ್ನಿಸುತ್ತಿದೆ. ಅಲ್ಲದೇ ಮತದಾರರನ್ನುಡೊನಾಲ್ಡ್ ಟ್ರಂಪ್ ಪರ ಸೆಳೆಯುವ ಕಾರ್ಯದಲ್ಲಿ ನಿರತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮರು ಆಯ್ಕೆಗೆ ಚೀನಾ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರದ ನೀತಿಗಳು ತನ್ನ ಹಿತಾಸಕ್ತಿಗೆ ವಿರುದ್ಧವಾಗಿವೆ ಎನ್ನುವುದು ಚೀನಾ ನಿಲುವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಟ್ರಂಪ್ ಮರು ಆಯ್ಕೆಯಾಗಲು ರಷ್ಯಾ ನೆರವಾಗುತ್ತಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಈ ಹಿಂದೆಯೂ 2016ರ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ, ಟ್ರಂಪ್ ಬೆಂಬಲಕ್ಕೆ ನಿಂತಿತ್ತು ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈ ವಿಷಯವನ್ನು ಟ್ರಂಪ್ ಅಲ್ಲಗೆಳೆದಿದ್ದರು.

ಈ ಬಗ್ಗೆ ನ್ಯೂಜೆರ್ಸಿಯಲ್ಲಿ ಪ್ರತಿಕ್ರಿಯಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ರಷ್ಯಾ, ಜೋ ಬಿಡನ್ ಅವರ ವಿರುದ್ಧವಾಗಿದೆ ಎಂಬ ವಿಷಯವನ್ನು ನಾನು ಸ್ವೀಕರಿಸಲ್ಲ. ಏಕೆಂಕರೆ ರಷ್ಯಾದ ವಿರುದ್ಧ ಅತಿ ಹೆಚ್ಚು ಕಠಿಣ ನಿರ್ಧಾರಗಳನ್ನು ನಾನು ಕೈಗೊಂಡಿದ್ದೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.