ಇಸ್ಲಾಮಾಬಾದ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶಮನದ ನಿಟ್ಟಿನಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಇರಾನ್ ನಿಯೋಗವು ಶನಿವಾರ(ಏ 11) ಬೆಳಗಿನ ಜಾವ ಇಸ್ಲಾಮಾಬಾದ್ಗೆ ಬಂದಿಳಿದಿದೆ ಎಂದು ವರದಿ ತಿಳಿಸಿದೆ.

ಮಾತುಕತೆಗಾಗಿ ಉಭಯ ದೇಶಗಳು ಫೆಬ್ರುವರಿ 7ರಂದು ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಬಂದಿದ್ದವು. ಆ ಮೂಲಕ ಪರಸ್ಪರ ದಾಳಿ ನಡೆಸದೇ ಇರಲು ನಿರ್ಧರಿಸಿದ್ದವು.

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ಎರಡು ವಾರಗಳ ಕದನ ವಿರಾಮದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಅಮೆರಿಕ ಮತ್ತು ಇರಾನ್ ಇಸ್ಲಾಮಾಬಾದ್ನಲ್ಲಿ ಮಾತುಕತೆ ನಡೆಸಲಿವೆ ಎಂದು ಅವರು ಹೇಳಿದ್ದರು. ಅಮೆರಿಕ ಮತ್ತು ಇರಾನ್ ಅಧ್ಯಕ್ಷರಿಗೆ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದರು.

ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗ ಆಗಮಿಸಿದ್ದು, ಉಪಾಧ್ಯಕ್ಷ ಜೆ.ಡಿ, ವ್ಯಾನ್ಸ್ ನೇತೃತ್ವದ ಅಮೆರಿಕ ನಿಯೋಗ ಆಗಮನದ ನಂತರ ಶನಿವಾರ(ಏ 11) ಮಾತುಕತೆ ಆರಂಭವಾಗಲಿದೆ.

ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಅಮೆರಿಕದಿಂದ ಹೊರಟಿದ್ದು, ಯಾವುದೇ ಸಮಯದಲ್ಲಿ ಪಾಕಿಸ್ತಾನ ತಲುಪಲಿದೆ. ಜೆ.ಡಿ. ವ್ಯಾನ್ಸ್ ಅವರಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ ಎಂದು ವರದಿ ತಿಲಿಸಿದೆ.

ಇರಾನ್ನ ನಿಯೋಗವನ್ನು ಪಾಕ್ನ ಉಪ ಪ್ರಧಾನಿ, ವಿದೇಶಾಂಗ ಸಚಿವ ಇಶಾಕ್ ದರ್, ರಾಷ್ಟ್ರೀಯ ಸಂಸತ್ತಿನ ಸ್ಪೀಕರ್ ಅಯಾಜ್ ಸಾದಿಕ್, ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಸೈಯದ್ ಅಸಿಮ್ ಮುನೀರ್ ಮತ್ತು ಆಂತರಿಕ ಸಚಿವ ಸೈಯದ್ ಮೊಹ್ಸಿನ್ ರಜಾ ನಖ್ವಿ ಅವರು ಬರಮಾಡಿಕೊಂಡರು ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ತಿಳಿಸಿದೆ.

ಎರಡೂ ದೇಶಗಳ ನಿಯೋಗಗಳು ರಚನಾತ್ಮಕ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲಿವೆ ಎಂಬ ಭರವಸೆ ವ್ಯಕ್ತಪಡಿಸಿದ ದರ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ನೆರವು ನೀಡುವುದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ಲೆಬನಾನ್ನಲ್ಲಿ ಇಸ್ರೇಲ್ ನಡೆಸಿದ ದಾಳಿಯಿಂದಾಗಿ ಇರಾನಿಯನ್ನರ ಭೇಟಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿರುವ ನಡುವೆಯೇ ನಿಯೋಗವು ಇಸ್ಲಾಮಾಬಾದ್ಗೆ ತೆರಳಿದೆ.

ಕದನ ವಿರಾಮ ಒಪ್ಪಂದದಲ್ಲಿ ಒಪ್ಪಿಕೊಂಡ ಷರತ್ತುಗಳನ್ನು ಪೂರೈಸಿದರೆ ನಿಯೋಗ ಮಾತುಕತೆಗಳಲ್ಲಿ ಭಾಗವಹಿಸುತ್ತದೆ ಎಂದು ಇರಾನಿನ ಮಾಧ್ಯಮಗಳನ್ನು ಉಲ್ಲೇಖಿಸಿ ಕೆಲವು ವರದಿಗಳು ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.