ವಾಷಿಂಗ್ಟನ್: ಅಮೆರಿಕದಲ್ಲಿ ಉದ್ಯೋಗ ಆಧರಿತ ಗ್ರೀನ್ ಕಾರ್ಡ್‌ಗಾಗಿ ಕಾಯುತ್ತಿರುವವರ ಕಾಯಂ ವಾಸಕ್ಕೆ ಅನುಕೂಲ ಕಲ್ಪಿಸುವಂಥ ಕ್ರಮ ಕೈಗೊಳ್ಳಲು 40 ಸಂಸದರು ಒತ್ತಾಯಿಸಿದ್ದಾರೆ.

ಭಾರತೀಯ ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಸಂಸದರು ಸ್ಪೀಕರ್ ನ್ಯಾನ್ಸಿ ಪೆಲೋಸಿ ಹಾಗೂ ಸೆನೆಟ್‌ನ ನಾಯಕ ಚುಕ್ ಶೂಮರ್ ಅವರಿಗೆ ಪತ್ರ ಬರೆದಿದ್ದಾರೆ.

12 ಲಕ್ಷಕ್ಕೂ ಅಧಿಕ ವಿದೇಶಿಯರು ಅರ್ಜಿ ಸಲ್ಲಿಸಿ, ಗ್ರೀನ್ ಕಾರ್ಡ್‌ಗಾಗಿ ಕಾಯುತ್ತಿದ್ದಾರೆ. ಈ ಪೈಕಿ ಭಾರತೀಯರೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ.

‘ಗ್ರೀನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವವರ ಪೈಕಿ ಹೆಚ್ಚಿನವರು ಎಚ್–1ಬಿ ವೀಸಾ ಹೊಂದಿದವರಾಗಿದ್ದಾರೆ. ಸಂಕಷ್ಟದಲ್ಲಿರುವ ಅವರಿಗೆ ನೆರವು ನೀಡದಿದ್ದರೆ, ಆರ್ಥಿಕ ಪುನಶ್ಚೇತನ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು’ ಎಂದು ಈ ಸಂಸದರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.