ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ | ವಿವೇಕ್‌ ರಾಮಸ್ವಾಮಿಗೆ ಜೀವ ಬೆದರಿಕೆ: ಆರೋಪಿ ಬಂಧನ

Published 12 ಡಿಸೆಂಬರ್ 2023, 2:36 IST
Last Updated 12 ಡಿಸೆಂಬರ್ 2023, 2:36 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತ ಮೂಲದ ಅಮೆರಿಕದ ಅಧ್ಯಕ್ಷೀಯ ಆಕಾಂಕ್ಷಿ ವಿವೇಕ್‌ ರಾಮಸ್ವಾಮಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಟೈಲರ್ ಆಂಡರ್ಸನ್ ಎಂದು ಗುರುತಿಸಲಾಗಿದೆ.

ವಿವೇಕ್ ರಾಮಸ್ವಾಮಿ ಮತ್ತು ಅವರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಹತ್ಯೆ ಮಾಡುವುದಾಗಿ ಟೈಲರ್ ಆಂಡರ್ಸನ್ ಬೆದರಿಕೆ ಹಾಕಿದ್ದ. ಆತ ಕಳುಹಿಸಿರುವ ಸಂದೇಶಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೊದಲ ಸಂದೇಶದಲ್ಲಿ ವಿವೇಕ್‌ ರಾಮಸ್ವಾಮಿ ಅವರನ್ನು ಕೊಲ್ಲುವ ಅವಕಾಶ ಸಿಕ್ಕಿದೆ ಎಂದು ಟೈಲರ್ ಆಂಡರ್ಸನ್ ಬರೆದಿದ್ದ. ಎರಡನೇ ಸಂದೇಶದಲ್ಲಿ ವಿವೇಕ್‌ ರಾಮಸ್ವಾಮಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರನ್ನು ಕೊಲ್ಲುವುದಾಗಿ ಆತ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಅಮೆರಿಕ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT