ವಾಷಿಂಗ್ಟನ್: ಭಾರತ ಮತ್ತು ಚೀನಾ ನಡುವೆ ಸಂಘರ್ಷದ ಸಂದರ್ಭದಲ್ಲಿ ಅಮೆರಿಕದ ಸೇನೆ ಭಾರತದ ಪರ ನಿಲ್ಲಲಿದೆ ಎಂದು ಶ್ವೇತಭವನದ ಚೀಫ್ ಆಫ್ ಸ್ಟಾಫ್ ಮಾರ್ಕ್ ಮಿಡೋವ್ಸ್ ಹೇಳಿದ್ದಾರೆ.

ದಕ್ಷಿಣ ಚೀನಾ ಸಮುದ್ರದಲ್ಲಿ ಅಮೆರಿಕದ ನೌಕಾಪಡೆಯ ಎರಡು ಯುದ್ಧನೌಕೆಗಳನ್ನು ನಿಯೋಜನೆ ಮಾಡಿದ ಸಂದರ್ಭದಲ್ಲಿಯೇ ಮಾರ್ಕ್ ಅವರು ಈ ಹೇಳಿಕೆಗೆ ಮಹತ್ವ ಬಂದಿದೆ.

‘ನಮ್ಮ ನಿಲುವು, ಸಂದೇಶ ಸ್ಪಷ್ಟವಾಗಿದೆ. ಚೀನಾ ಅಥವಾ ಇತರ ಯಾವುದೇ ದೇಶವಾಗಲಿ ದಕ್ಷಿಣ ಚೀನಾ ಸಮುದ್ರ ಇಲ್ಲವೇ ಇತರ ಪ್ರದೇಶಗಳಲ್ಲಿ ತಮ್ಮ ಪ್ರಾಬಲ್ಯ ಪ್ರದರ್ಶನಕ್ಕೆ ಮುಂದಾದರೆ ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ’ ಎಂದು ಅವರು ’ಫಾಕ್ಸ್ ನ್ಯೂಸ್’ ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಚೀನಾಕ್ಕೆ ಸಂಬಂಧಿಸಿದ ಹಲವು ಮಹತ್ವದ ಆದೇಶಗಳಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂಕಿತ ಹಾಕಲಿದ್ದಾರೆ’ ಎಂಬ ಸುಳಿವನ್ನೂ ಅವರು ಈ ಸಂದರ್ಭದಲ್ಲಿ ನೀಡಿದರು.

‘ಚೀನಾದಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಸ್ಥಳಾಂತರ ಮಾಡುವುದು, ಆ ಮೂಲಕ ಅಮೆರಿಕದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಮಹತ್ವದ ನಿರ್ಣಯವೂ ಇದರಲ್ಲಿ ಸೇರಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.