ಬೀಜಿಂಗ್: ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೇ ಮೇ 13ರಿಂದ 15ರವರೆಗೆ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿಯೇ ಅಮೆರಿಕ ಅಧ್ಯಕ್ಷರೊಬ್ಬರು ಚೀನಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಟ್ರಂಪ್ ಅವರು ಮೊದಲ ಅವಧಿ ಅಧ್ಯಕ್ಷರಾಗಿದ್ದ ವೇಳೆಯೂ ಚೀನಾಕ್ಕೆ ಭೇಟಿ ನೀಡಿದ್ದರು.

ಅಮೆರಿಕ ಹಾಗೂ ಇಸ್ರೇಲ್ ಇರಾನ್ ಮೇಲೆ ಜಂಟಿಯಾಗಿ ದಾಳಿ ನಡೆಸಿದ ಕಾರಣ ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ, ಹೊರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗುಗಳ ಮೇಲೆ ನಿರ್ಬಂಧದಿಂದ ಜಾಗತಿಕ ಮಟ್ಟದಲ್ಲಿ ಉಲ್ಬಣಗೊಂಡಿರುವ ಇಂಧನ ಬಿಕ್ಕಟ್ಟು, ತೈವಾನ್ ಸೇರಿದಂತೆ ಹಲವು ವಿಷಯಗಳ ಕುರಿತಂತೆ ಚೀನಾ–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಉಭಯ ನಾಯಕರ ಭೇಟಿಯು ಮಹತ್ವ ಪಡೆದುಕೊಂಡಿದೆ.

‘ಡೊನಾಲ್ಡ್ ಟ್ರಂಪ್ ಅವರು ಬುಧವಾರ ಬೀಜಿಂಗ್ಗೆ ಬಂದಿಳಿಯಲಿದ್ದಾರೆ. ಸಾಂಕೇತಿಕವಾಗಿ ಇದು ಮಹತ್ವದ ಭೇಟಿಯಾಗಿದೆ’ ಎಂದು ಅಮೆರಿಕದ ಪ್ರಧಾನ ಉಪ ಪತ್ರಿಕಾ ಕಾರ್ಯದರ್ಶಿ ಅನ್ನ ಕೆಲ್ಲಿ ತಿಳಿಸಿದ್ದಾರೆ.

‘ಟ್ರಂಪ್ ಅವರು ಗುರುವಾರ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ, ಆಮೇಲೆ ಜಿನ್ಪಿಂಗ್ ಜೊತೆಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ‘ಟೆಂಪಲ್ ಆಫ್ ಹೆವನ್’ನಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ’ ಎಂದು ಹಾಂಗ್ಕಾಂಗ್ ಮೂಲದ ‘ಸೌತ್ ಚೈನಾ ಮಾರ್ನಿಂಗ್’ ಫೋಸ್ಟ್ ವರದಿ ಮಾಡಿದೆ.

ಶುಕ್ರವಾರ ಮತ್ತೆ ಉಭಯ ನಾಯಕರು ಭೇಟಿಯಾಗಲಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಚೀನಾದ ಮೇಲೆ ವಿಧಿಸಲಾಗಿರುವ ದೊಡ್ಡ ಮಟ್ಟದ ಸುಂಕದ ಹೊರತಾಗಿಯೂ ವಿಶ್ವದ ಎರಡು ಪ್ರಮುಖ ಆರ್ಥಿಕ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.