ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹ್ಯಾರಿಸ್ ಜತೆ ಮತ್ತೊಂದು ಮುಖಾಮುಖಿ ಚರ್ಚೆಯಲ್ಲಿ ಭಾಗಿಯಾಗುವುದಿಲ್ಲ: ಟ್ರಂಪ್

Published : 13 ಸೆಪ್ಟೆಂಬರ್ 2024, 3:00 IST
Last Updated : 13 ಸೆಪ್ಟೆಂಬರ್ 2024, 3:00 IST
ಫಾಲೋ ಮಾಡಿ
Comments

ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಅಮೆರಿಕದ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರೊಂದಿಗೆ ಮತ್ತೊಂದು ಸಲ ಚರ್ಚೆಯಲ್ಲಿ ಮುಖಾಮುಖಿಯಾಗುವುದಿಲ್ಲ ಎಂದು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಟ್ರುಥ್'ನಲ್ಲಿ ಬರೆದುಕೊಂಡಿರುವ ಟ್ರಂಪ್, 'ಪ್ರತಿಸ್ಪರ್ಧಿ ಅಭ್ಯರ್ಥಿಯೊಂದಿಗೆ ಮೂರನೇ ಸಂವಾದ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಅವರು ಜೂನ್ ತಿಂಗಳಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನೇರ ಟಿ.ವಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಈ ವಾರದಲ್ಲಿ ನಡೆದ ಟ್ರಂಪ್ ಹಾಗೂ ಹ್ಯಾರಿಸ್‌ ನಡುವಣ ಮುಖಾಮುಖಿ ಚರ್ಚೆಯಲ್ಲಿ ತೀವ್ರ ವಾಕ್ಸಮರ ಏರ್ಪಟ್ಟಿತ್ತು.

ಈಗ ಎರಡನೇ ಸಲ ಮುಖಾಮುಖಿ ಸಂವಾದದ ಸವಾಲನ್ನು ಎದುರಿಸಲು ಟ್ರಂಪ್ ಅವರಿಗೆ ಕಮಲಾ ಹ್ಯಾರಿಸ್ ಆಹ್ವಾನ ನೀಡಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್, 'ಕಮಲಾ ಹ್ಯಾರಿಸ್ ವಿರುದ್ಧ ನಡೆದ ಚರ್ಚೆಯಲ್ಲಿ ನಾನು ಗೆಲುವು ಸಾಧಿಸಿದ್ದೇನೆ ಎಂದು ಸಮೀಕ್ಷೆಗಳು ತೋರಿಸುತ್ತಿವೆ. ಸ್ಪರ್ಧೆಯಲ್ಲಿ ಪ್ರತಿಸ್ಪರ್ಧಿ ಸೋತಾಗ, ಮತ್ತೊಂದು ಸುತ್ತಿನ ಸಂವಾದವನ್ನು ಬಯಸುತ್ತಾರೆ' ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಜೂನ್ ತಿಂಗಳಲ್ಲಿ ಟ್ರಂಪ್ ವಿರುದ್ಧದ ಮುಖಾಮುಖಿ ಚರ್ಚೆಯಲ್ಲಿ ಬೈಡನ್ ಹಿನ್ನಡೆ ಅನುಭವಿಸಿದ್ದರು. ಇದಿಂದ ಡೆಮಾಕ್ರಟಿಕ್ ಪಕ್ಷದಲ್ಲೇ ಭಿನ್ನಾಭಿಪ್ರಾಯ ಉಂಟಾಗಿತ್ತು. ಬಳಿಕ ಅಧ್ಯಕ್ಷೀಯ ಚುನಾವಣೆಯಿಂದ ಬೈಡನ್ ಹಿಂದೆ ಸರಿದಿದ್ದರು.

ಅಮೆರಿಕದ ಅಧ್ಯಕ್ಷೀಯ ಚುನಾವಣೆ ನವೆಂಬರ್ 5ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT