ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಸಿಎಎ ಜಾರಿ; ಕಳವಳ ಇದೆ ಎಂದು ಹೇಳಿದ ಅಮೆರಿಕ

Published 15 ಮಾರ್ಚ್ 2024, 2:25 IST
Last Updated 15 ಮಾರ್ಚ್ 2024, 2:25 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತದಲ್ಲಿ 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿಗೆ ಬಂದಿದೆ ಎಂಬ ಅಧಿಸೂಚನೆಯ ಬಗ್ಗೆ ಕಳವಳ ಇದೆ ಎಂದು ಅಮೆರಿಕ ಹೇಳಿದೆ. ಅಲ್ಲದೆ ಇದರ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ.

ಮಾರ್ಚ್ 11ರಂದು 'ಪೌರತ್ವ ತಿದ್ದುಪಡಿ ಕಾಯ್ದೆ' ಕುರಿತು ಭಾರತ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕುರಿತು ಕಳವಳ ಹೊಂದಿದ್ದೇವೆ ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ.

ಈ ಕಾಯ್ದೆಯನ್ನು ಹೇಗೆ ಜಾರಿಗೊಳಿಸಲಾಗುತ್ತದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಕಾನೂನಿನ ಅಡಿಯಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಪರಿಗಣಿಸುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳಾಗಿವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಸಿಎಎ ಜಾರಿಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT