ಪೋರ್ಟ್‌ಲ್ಯಾಂಡ್ (ಅಮೆರಿಕ): ಅಮೆರಿಕದ ಒರೆಗನ್‌ನ ಅತಿ ದೊಡ್ಡ ನಗರ ಪೋರ್ಟ್‌ಲ್ಯಾಂಡ್‌ನಲ್ಲಿ ಶನಿವಾರ ನಡೆದ ನಾಲ್ಕು ಬೇರೆ ಬೇರೆಗುಂಡಿನ ದಾಳಿಯ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಕಳೆದ ಆರು ತಿಂಗಳಿನಿಂದ ಶೂಟೌಟ್ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೆ ಕಳೆದೊಂದು ವರ್ಷದಲ್ಲಿ 125 ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಪಡೆಯದವರಲ್ಲಿ ಕೋವಿಡ್ ಸೋಂಕು ಹೆಚ್ಚು: ಜೋ ಬೈಡನ್

ಮಿನ್ನಿಯಾಪೊಲಿಸ್ ಬಿಳಿ ಪೊಲೀಸರಿಂದ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆಯ ಬಳಿಕ ಪೊಲೀಸ್ ದೌರ್ಜನ್ಯ ಹಾಗೂ ಜನಾಂಗೀಯ ನಿಂದನೆಯ ವಿರುದ್ಧ ಪ್ರತಿಭಟನೆಯ ಕಾವು ಜೋರಾಗಿದೆ. ಅಲ್ಲದೆ ಹಿಂಸಾಚಾರ ಪ್ರಕರಣಗಳು ವರದಿಯಾಗುತ್ತಿವೆ.

38 ತಾಸಿನ ಅವಧಿಯಲ್ಲಿ 11 ಕಡೆಗಳಲ್ಲಿ ಶೂಟೌಟ್ ಪ್ರಕರಣಗಳು ವರದಿಯಾಗಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋರ್ಟ್‌ಲ್ಯಾಂಡ್‌ನಲ್ಲಿ ನಡೆದ ಮೊದಲ ಪ್ರಕರಣದಲ್ಲಿ 18 ವರ್ಷದ ಯುವತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಇದರ ಹಿಂದಿನ ಕಾರಣಗಳು ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ವಿಡಿಯೊ ಅಥವಾ ಚಿತ್ರಗಳಿದ್ದರೆ ತಕ್ಷಣ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಇದಾದ ಕೆಲವೇ ತಾಸಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ಮೂರು ಗುಂಡಿನ ದಾಳಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಓರ್ವ ಮೃತಪಟ್ಟಿದ್ದಾರೆ.

ಈ ವರ್ಷ ಪೋರ್ಟ್‌ಲ್ಯಾಂಡ್‌ನಲ್ಲಿ ಇದುವರೆಗೆ 570 ಗುಂಡಿನ ದಾಳಿ ಪ್ರಕರಣಗಳು ನಡೆದಿವೆ. ಕಳೆದ ವರ್ಷಕ್ಕೆ ಹೋಲಿಸಿದಾಗ ಶೂಟೌಟ್ ಪ್ರಕರಣ ಇಮ್ಮಡಿಯಾಗಿದ್ದು, ಬಹುತೇಕ ಪ್ರಕರಣಗಳು ಗ್ಯಾಂಗ್ ಸಂಬಂಧಿತ ಘರ್ಷಣೆಯಾಗಿದೆಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.