ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ನತ್ತ ಬರುತ್ತಿದ್ದ ಇರಾನ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕ ಸೇನೆ

Published 14 ಏಪ್ರಿಲ್ 2024, 3:42 IST
Last Updated 14 ಏಪ್ರಿಲ್ 2024, 3:42 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಇಸ್ರೇಲ್‌ನತ್ತ ನುಗ್ಗಿ ಬರುತ್ತಿದ್ದ ಇರಾನ್‌ನ ಹಲವು ಡ್ರೋನ್‌ಗಳನ್ನು ಅಮೆರಿಕ ಸೇನೆ ಹೊಡೆದುರುಳಿಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. 

ಇಸ್ರೇಲ್‌ ಮೇಲೆ ಪ್ರತೀಕಾರದ ದಾಳಿ ನಡೆಸುತ್ತಿರುವ ಇರಾನ್‌ ನಡೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಖಂಡಿಸಿದ್ದಾರೆ. ಮಿತ್ರ ರಾಷ್ಟ್ರ ಇಸ್ರೇಲ್‌ ಪರ ನಿಲ್ಲುವುದಾಗಿ ಹೇಳಿದ್ದ ಬೈಡನ್‌ ಇಸ್ರೇಲ್‌ಗೆ ಸೇನಾ ನೆರವನ್ನು ಒದಗಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ಸ್ಥಿತಿಯ ಕುರಿತು ಮಾತನಾಡಿದ ಇಬ್ಬರು ಅಧಿಕಾರಿಗಳು, ಕೆಲವು ಕ್ಷಿಪಣಿಗಳನ್ನು ಅಮೆರಿಕ ನೌಕಾಪಡೆ ಹೊಡೆದುರುಳಿಸಿದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಸಿರಿಯಾದ ಡಮಾಸ್ಕಸ್‌ನಲ್ಲಿ ಇರಾನ್ ಕಚೇರಿಯ ಮೇಲಿನ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT