ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರು ಸೋಮವಾರ ಸ್ಯಾನ್ ಡಿಯಾಗೋದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಈ ಘೋಷಣೆ ಹೊರಡಿಸಲಾಗಿದೆ. ಇಂಡೋ– ಪೆಸಿಫಿಕ್ ಪ್ರದೇಶವನ್ನು ‘ಸ್ವತಂತ್ರ ಮತ್ತು ಮುಕ್ತ’ವಾಗಿಡುವುದಕ್ಕೆ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಘೋಷಣೆಯಲ್ಲಿ ಪ್ರತಿಪಾದಿಸಲಾಗಿದೆ.