ನವದೆಹಲಿ: ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಬೇಕೆಂದು ಒತ್ತಡ ಹೇರುತ್ತಿರುವ ಬೆನ್ನಲ್ಲೇ ವೆನೆಜುವೆಲಾದ ತೈಲವನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ವರದಿಯಾಗಿದೆ.

ತೈಲ ನಿಕ್ಷೇಪ ಸಂಪದ್ಭರಿತ ರಾಷ್ಟ್ರ ವೆನೆಜುವೆಲಾ ಮೇಲೆ ಕಳೆದ ವಾರ ಅಮೆರಿಕ ಸೇನಾಪಡೆಗಳು ದಾಳಿ ನಡೆಸಿದ್ದವು. ಇದೇ ವೇಳೆ ವೆನೆಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋಸ್ ಅವರನ್ನು ಬಂಧಿಸಿದ್ದವು.

ಈ ವರ್ಷದ ಆರಂಭದಲ್ಲಿ ಅಮೆರಿಕ ಮತ್ತು ವೆನೆಜುವೆಲಾ ನಡುವೆ 18 ಸಾವಿರ ಕೋಟಿ ಮೌಲ್ಯದ ಕಚ್ಚಾ ತೈಲ ಒಪ್ಪಂದ ಏರ್ಪಟ್ಟಿತ್ತು. ಇದರ ನಡುವೆ ರಷ್ಯಾದೊಂದಿಗಿನ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ನಿರ್ಬಂಧಗಳನ್ನು ವಿಧಿಸುವ ಮೂಲಕ ಭಾರತದಿಂದ ಆಮದಾಗುವ ಸರಕುಗಳ ಮೇಲೆ ಅಮೆರಿಕ ಶೇ 50ರಷ್ಟು ಸುಂಕ ಏರಿಕೆ ಮಾಡಿತ್ತು. ಇಷ್ಟೇ ಅಲ್ಲದೆ, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ಶೇ 500ರಷ್ಟು ತೆರಿಗೆ ವಿಧಿಸಲು ಅನುಮತಿಸುವ ಮಸೂದೆಗೆ ಟ್ರಂಪ್ ಒಪ್ಪಿಗೆ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹೊರತಾಗಿಯೂ ಹೊಸ ವ್ಯಾಪಾರ ಒಪ್ಪಂದದ ಚೌಕಟ್ಟಿನಡಿಯಲ್ಲಿ ಭಾರತಕ್ಕೆ ವೆನೆಜುವೆಲಾದ ತೈಲವನ್ನು ಮಾರಾಟ ಮಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ವೆನೆಜುವೆಲಾದ ತೈಲವನ್ನು ಮಾರಾಟ ಮಾಡಲು ಅಮೆರಿಕ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತವು ವೆನೆಜುವೆಲಾದ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕ ಅನುಮತಿಸುತ್ತದೆಯೇ ಎಂಬ ಪ್ರಶ್ನೆಗೆ ಅಮೆರಿಕದ ಹಿರಿಯ ಆಡಳಿತ ಅಧಿಕಾರಿಯೊಬ್ಬರು ಉತ್ತರಿಸಿದ್ದು, ‘ಹೌದು’ ಎಂದು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಕಚ್ಚಾ ತೈಲ ಖರೀದಿ ದೇಶಗಳ ಸಾಲಿನಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆ ಕೋರಿದ್ದು, ಬ್ರ್ಯಾಂಡ್ನ ಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭಾರತಕ್ಕೆ ಮತ್ತೆ ತೈಲ ಖರೀದಿಸಲು ಅವಕಾಶ ಸಿಕ್ಕಿರುವುದನ್ನು ‘ದೊಡ್ಡ ಗೆಲುವು’ ಎಂದು ಹಲವು ವರದಿಗಳು ಹೇಳಿವೆ.

ಭಾರತವು ಸೇರಿದಂತೆ ಬಹುತೇಕ ಎಲ್ಲಾ ದೇಶಗಳಿಗೆ ವೆನೆಜುವೆಲಾದ ತೈಲವನ್ನು ಮಾರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಯುಎಸ್ ಇಂಧನ ಕಾರ್ಯದರ್ಶಿ ಕ್ರಿಸ್ಟೋಫರ್ ರೈಟ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.