ವಾಷಿಂಗ್ಟನ್: ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಿರುವುದು ವಿಶ್ವದಾದ್ಯಂತ ಪರಮಾಣು ಶಸ್ತ್ರಾಸ್ತ್ರ ಸ್ಪರ್ಧೆಯನ್ನು ಪ್ರಚೋದಿಸುತ್ತದೆ ಎಂದು ಅಮೆರಿಕದ ಉಪಾಧ್ಯಕ್ಷ ಜೆ ಡಿ. ವ್ಯಾನ್ಸ್ ಹೇಳಿದ್ದಾರೆ. ಇರಾನ್ ಶಾಂತಿ ಒಪ್ಪಂದಕ್ಕೆ ಬರಲು ವಿಫಲವಾದರೆ ಮಿಲಿಟರಿ ಕಾರ್ಯಾಚರಣೆ ಪುನರಾರಂಭಿಸಲು ಅಮೆರಿಕ ಸಿದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕತಾರ್ ಮತ್ತು ಯುಎಇ ಸೇರಿದಂತೆ ಅರಬ್ ರಾಷ್ಟ್ರಗಳ ಕೋರಿಕೆಯ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ಮಿಲಿಟರಿ ದಾಳಿಯನ್ನು ಪುನರಾರಂಭಿಸುವ ನಿರ್ಧಾರವನ್ನು ಮುಂದೂಡಿದ ಒಂದು ದಿನದ ನಂತರ ಶ್ವೇತಭವನದ ಪತ್ರಿಕಾಗೋಷ್ಠಿಯಲ್ಲಿ ವ್ಯಾನ್ಸ್ ಈ ಹೇಳಿಕೆ ನೀಡಿದ್ದಾರೆ.

‘ಇರಾನಿಯನ್ನರು ಒಪ್ಪಂದ ಮಾಡಿಕೊಳ್ಳಲು ಬಯಸುತ್ತಾರೆ ಎಂದು ನಾವು ಭಾವಿಸುತ್ತೇವೆ. ಅಮೆರಿಕ ಅಧ್ಯಕ್ಷರು ಬಹಳ ನಂಬಿಕೆಯಿಂದ ನಮ್ಮನ್ನು ಮಾತುಕತೆ ನಡೆಸಲು ಕೇಳಿಕೊಂಡಿದ್ದಾರೆ. ನಾವು ಅದೇ ಹಾದಿಯಲ್ಲಿದ್ದೇವೆ’ ಎಂದಿದ್ದಾರೆ.

ಆದರೆ, ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಬಾರದು ಎಂಬ ಟ್ರಂಪ್ ಅವರ ಪ್ರಮುಖ ಬೇಡಿಕೆಗೆ ರಾಜತಾಂತ್ರಿಕತೆಯು ಧಕ್ಕೆ ತರುವುದಿಲ್ಲ. ಅಧ್ಯಕ್ಷರ ಮಾತಿನಂತೆ ಮುಂದುವರಿಯುತ್ತೇವೆ ಎಂದಿದ್ದಾರೆ.

'ಇರಾನ್ ನಿಜವಾಗಿಯೂ ಪ್ರಪಂಚದಾದ್ಯಂತ ಪರಮಾಣು ಶಸ್ತ್ರಾಸ್ತ್ರ ಸ್ಪರ್ಧೆಗೆ ಕಾರಣವಾಗುವ ಮೊದಲ ರಾಷ್ಟ್ರವಾಗಲಿದೆ' ಎಂದು ಅವರು ಹೇಳಿದ್ದಾರೆ.

‘ಇರಾನಿಯನ್ನರು ಪರಮಾಣು ಶಸ್ತ್ರಾಸ್ತ್ರವನ್ನು ಪಡೆದರೆ, ಕೊಲ್ಲಿಯಲ್ಲಿನ ಹಲವು ರಾಷ್ಟ್ರಗಳು ತಮ್ಮದೇ ಆದ ಪರಮಾಣು ಶಸ್ತ್ರಾಸ್ತ್ರವನ್ನು ಬಯಸುತ್ತವೆ. ನಂತರ ಪ್ರಪಂಚದಾದ್ಯಂತದ ರಾಷ್ಟ್ರಗಳು ತಮ್ಮದೇ ಆದ ಪರಮಾಣು ಶಸ್ತ್ರಾಸ್ತ್ರವನ್ನು ಬಯಸುತ್ತವೆ ಎಂದು ನಮಗೆ ತಿಳಿದಿದೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿರುವ ದೇಶಗಳ ಸಂಖ್ಯೆಯನ್ನು ಕಡಿಮೆ ಇರಿಸಿಕೊಳ್ಳಲು ನಾವು ಬಯಸುತ್ತೇವೆ. ಅದಕ್ಕಾಗಿಯೇ ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ’ಎಂದು ವ್ಯಾನ್ಸ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.